ಹೊನ್ನಾಳಿಯಲ್ಲಿ ಮಾದಿಗ ದಂಡೋರ ಸಮಿತಿ ವಿಜಯೋತ್ಸವ

| Published : Aug 03 2024, 12:32 AM IST

ಹೊನ್ನಾಳಿಯಲ್ಲಿ ಮಾದಿಗ ದಂಡೋರ ಸಮಿತಿ ವಿಜಯೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಸುಪ್ರೀಂ ಕೋರ್ಟ್ ಸಂವಿಧಾನ ಪೀಠವು ರಾಜ್ಯಗಳಿಗೆ ಪರಿಶಿಷ್ಟ ಜಾತಿಗೆ ಪ್ರತ್ಯೇಕ ಒಳ ಮೀಸಲಾತಿ ನೀಡುವ ಅಧಿಕಾರವಿದೆ ಎಂಬ ಐತಿಹಾಸಿಕ ತೀರ್ಪು ನೀಡಿರುವ ಹಿನ್ನೆಲೆ ಮಾದಿಗ ದಂಡೋರ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿಗಳ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಪುಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.

ಹೊನ್ನಾಳಿ: ಸುಪ್ರೀಂ ಕೋರ್ಟ್ ಸಂವಿಧಾನ ಪೀಠವು ರಾಜ್ಯಗಳಿಗೆ ಪರಿಶಿಷ್ಟ ಜಾತಿಗೆ ಪ್ರತ್ಯೇಕ ಒಳ ಮೀಸಲಾತಿ ನೀಡುವ ಅಧಿಕಾರವಿದೆ ಎಂಬ ಐತಿಹಾಸಿಕ ತೀರ್ಪು ನೀಡಿರುವ ಹಿನ್ನೆಲೆ ಮಾದಿಗ ದಂಡೋರ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿಗಳ ಮುಖಂಡರ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.

ತಾಲೂಕು ಸಮಿತಿ ಅಧ್ಯಕ್ಷ ಜಿ.ಎಚ್.ತಮ್ಮಣ್ಣ ದಿಡಗೂರು ಮಾತನಾಡಿ, ನ್ಯಾಯ ಪೀಠವು ಬಹುಮತದ ತೀರ್ಪು ನೀಡಿದೆ. ಇದನ್ನು ಕರ್ನಾಟಕ ಮಾದಿಗ ದಂಡೋರ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿಗಳು ತುಂಬು ಹೃದಯದಿಂದ ಸ್ವಾಗತಿಸುತ್ತವೆ ಎಂದರು.

ದೇಶದ ಶೋಷಿತರಲ್ಲಿ ಅತ್ಯಂತ ಆಸ್ಪೃಶ್ಯ ಜಾತಿ, ಸಮುದಾಯದ ಜನರಿಗೆ ನ್ಯಾಯಾಲಯದ ಈ ತೀರ್ಪು ಸಾಮಾಜಿಕ ನ್ಯಾಯ ದೂರಕಿಸಿಕೊಡುತ್ತದೆ. ಕೇಂದ್ರ ಸರ್ಕಾರದ ಅನುಮತಿಗೆ ಕಾಯುವ, ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಇದು ನಿಜಕ್ಕೂ ದಲಿತ ಸಮುದಾಯಕ್ಕೆ ಐತಿಹಾಸಿಕ ಕೊಡುಗೆಯಾಗಿದೆ. ರಾಜ್ಯ ಸರ್ಕಾರ ಯಾವುದೇ ಸಬೂಬು ಹೇಳದೇ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಪಡಿಸಿದರು.

ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜಪ್ಪ, ಸೊರಟೂರು ಹನುಮಂತಪ್ಪ, ಮಾರಿಕೊಪ್ಪದ ಮಂಜಪ್ಪ, ಬೇಲಿಮಲ್ಲೂರು ಉಮೇಶ್, ಗೋವಿನಕೋವಿ ನರಸಿಂಹಪ್ಪ, ಕುರುವ ಮಂಜುನಾಥ್, ರೈತ ಸಂಘದ ಅಧ್ಯಕ್ಷ ಅರಬಗಟ್ಟೆ ಬಸಪ್ಪ, ಹಿರೇಮಠದ ಬಸವರಾಜಪ್ಪ, ಮಂಜಪ್ಪ ಕೆಂಚಿಕೊಪ್ಪ, ಹಾಲೇಶ್ ಮುಕ್ತೇನಹಳ್ಳಿ, ಫಕ್ಕೀರಪ್ಪ ಚೀಲೂರು, ಜಯಪ್ಪ ಕುಂಕುವ, ಶೇಖರಪ್ಪ

ಮಾದೇನಹಳ್ಳಿ, ಆನಂದಪ್ಪ, ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

- - - -2ಎಚ್.ಎಲ್.ಐ1: ಹೊನ್ನಾಳಿ ಪಟ್ಟಣದಲ್ಲಿ ಮಾದಿಗ ದಂಡೋರ ಸಮಿತಿ, ದಲಿತ ಸಂಘರ್ಷ ಸಮಿತಿಗಳಿಂದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಿಹಿ ವಿತರಿಸಿ ಸಂಭ್ರಮಿಸಲಾಯಿತು.