ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು
ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತುಕೊಡಗು-ಮೈಸೂರು ಜಿಲ್ಲೆಗಳ ಗಡಿ ಕಾವೇರಿ ಸೇತುವೆ ಬಳಿಯಿಂದ ಆರಂಭಗೊಂಡ ಸ್ವಚ್ಛತಾ ಅಭಿಯಾನದ ಅಂಗವಾಗಿ ಕಾರ್ಯಕರ್ತರು ಹೆದ್ದಾರಿ ರಸ್ತೆ ಬದಿಯಲ್ಲಿ ಹರಡಿದ್ದ ಕಸ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿಗೊಳಿಸಿದರು.
ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಎಂ ಪಿ ಅಪ್ಪಚ್ಚುರಂಜನ್ ಮಾತನಾಡಿ, ಸ್ವಚ್ಛತೆ ಶುಚಿತ್ವ ಕಾಪಾಡುವುದು ಪ್ರತಿಯೊಬ್ಬರ ಆಧ್ಯ ಜವಾಬ್ದಾರಿಯಾಗಿದೆ ಎಂದರು.ಪ್ರಧಾನಿ ನರೇಂದ್ರ ಮೋದಿ ಅವರು 25 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ.
ಅವರ ಹುಟ್ಟುಹಬ್ಬ ಮತ್ತು ಗಾಂಧಿ ಅವರ 157ನೇ ಜಯಂತಿ ಪ್ರಯುಕ್ತ ಸ್ವಚ್ಛತಾ ಆಂದೋಲನ ಮೂಲಕ ಜಾಗೃತಿ ಕಾರ್ಯಕ್ರಮ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ನಲ್ಲೂ ಹಮ್ಮಿಕೊಳ್ಳಲಾಗಿದೆ.ನಗರ ಬಿಜೆಪಿ ಅಧ್ಯಕ್ಷ ಎಂ.ಎಂ.ಚರಣ್, ಪ್ರಧಾನ ಕಾರ್ಯದರ್ಶಿ ಮಧುಸೂದನ್, ಪ್ರಮುಖರಾದ ಗಣಿಪ್ರಸಾದ್, ಜೈವರ್ಧನ್, ಬೋಸ್ ಮೊಣ್ಣಪ್ಪ, ಎಂ ವಿ ನಾರಾಯಣ, ಪ್ರಭಾಕರ್, ಗಣಪತಿ, ವೈಶಾಖ್, ಪ್ರವೀಣ್, ಸುಮನ್, ಸಚಿನ್, ಶಿವರಾಜ್, ಗೀತಾ, ಅನಿತಾ, ಮತ್ತಿತರರು ಪಾಲ್ಗೊಂಡಿದ್ದರು.