ಸಾರಾಂಶ
ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಮಡಿಕೇರಿ ದಸರಾ ಸಮಿತಿ ನಿಯೋಗ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರು. ಅನುದಾನ ನೀಡುವಂತೆ ಮನವಿ ಮಾಡಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಈ ಬಾರಿಯೂ 1.5 ಕೋಟಿ ರು. ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಮಡಿಕೇರಿ ದಸರಾ ಸಮಿತಿ ನಿಯೋಗ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಡಿಕೇರಿ ದಸರಾ ಜನೋತ್ಸವಕ್ಕೆ 2 ಕೋಟಿ ರು. ಅನುದಾನ ನೀಡುವಂತೆ ಮನವಿ ಮಾಡಿತು.
ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಕಳೆದ ಬಾರಿ ದಸರಾಗೆ 1.5 ಕೋಟಿ ರು. ಅನುದಾನ ನೀಡಿದ್ದು, ಈ ಬಾರಿ ಹೆಚ್ಚಿಸುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಈ ಬಾರಿಯೂ ಅಷ್ಟೇ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.ಮಡಿಕೇರಿ ದಸರಾ ಜನೋತ್ಸವಕ್ಕೆ ಆಗಮಿಸುವಂತೆ ಶಾಸಕ ಮಂತರ್ ಗೌಡ ಮನವಿ ಮಾಡಿದರು.
ದಸರಾ ಸಮಿತಿ ಕಾರ್ಯದಕ್ಷ ಅರುಣ್ ಕುಮಾರ್, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿಗಳಾದ ಸಬಿತ, ಉಪಾಧ್ಯಕ್ಷ ಡಿಶು, ಕಾರ್ಯದರ್ಶಿ ಕಾಣೆಹಿತ್ಲು ಮೊಣ್ಣಪ್ಪ, ಸಹ ಕಾರ್ಯದರ್ಶಿ ಮುದ್ದುರಾಜು, ದಶಮಂಟಪ ಸಮಿತಿ ಅಧ್ಯಕ್ಷ ಹರೀಶ್ ಅನ್ವೇಕರ್, ವೇದಿಕೆ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಆರ್.ಪಿ., ಅಗ್ರಿಕಲ್ಚರ್ ಯುನಿವರ್ಸಿಟಿ ಬೋರ್ಡ್ ಸದಸ್ಯ ಕಾವೇರಿಯಪ್ಪ ಮತ್ತಿತರರು ಇದ್ದರು.