ಮಡಿಕೇರಿ ಸರ್ಕಾರಿ ಪ.ಪೂ. ಕಾಲೇಜು: ಆದಾಯ ತೆರಿಗೆ ಅರಿವು ಕಾರ್ಯಕ್ರಮ

| Published : Sep 19 2024, 01:49 AM IST

ಸಾರಾಂಶ

ಮಡಿಕೇರಿ ರೋಟರಿ ಸಂಸ್ಥೆ ಹಾಗೂ ಆದಾಯ ತೆರಿಗೆ ಇಲಾಖೆ ಸಹಭಾಗಿತ್ವದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳಿಗೆ ಆದಾಯ ತೆರಿಗೆ ಅರಿವು ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಡಿಕೇರಿ ರೋಟರಿ ಸಂಸ್ಥೆ ಹಾಗೂ ಆದಾಯ ತೆರಿಗೆ ಇಲಾಖೆ ಸಹಭಾಗಿತ್ವದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳಿಗೆ ಆದಾಯ ತೆರಿಗೆ ಅರಿವು ಕಾರ್ಯಕ್ರಮ ನಡೆಯಿತು.

ಕಾಲೇಜ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷ ಎಂ.ಸುದಯ್ ನಾಣಯ್ಯ, ಆಡಳಿತ ವ್ಯವಸ್ಥೆ ಜಾರಿಗೆ ಬಂದಲ್ಲಿಂದ ತೆರಿಗೆ ಸಂಗ್ರಹ ಅದರ ಭಾಗವಾಗಿ ಸೇರಿಕೊಂಡಿದೆ. ಈ ವಿಚಾರದಲ್ಲಿ ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ್ ಒಡೆಯರ್ ಉತ್ತಮ ಆಡಳಿತಗಾರರಾಗಿ ಪ್ರಸಿದ್ಧಿ ಪಡೆದಿದ್ದರು. ಸಂವಿಧಾನ ರಚನೆ ನಂತರ ಅದರಡಿ ರೂಪಿಸಿದ ಕಾಯ್ದೆಯನ್ವಯ ದೇಶದಲ್ಲಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ ಎಂದರು.

ಈಶ್ವರ್ ಭಟ್ ಮಾತನಾಡಿ, ಆದಾಯ ತೆರಿಗೆ ಕಾಯ್ದೆಯಲ್ಲಿ ಆದಾಯವನ್ನು ವಿವಿಧ ರೀತಿಯಲ್ಲಿ ವಿಂಗಡಿಸಲಾಗಿದೆ. ಅದರನ್ವಯ ತೆರಿಗೆಯನ್ನು ಜನರಿಂದ ಪಡೆಯಲಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿ ದಿವಾಕರ್ ರಾವ್, ಆದಾಯ ತೆರಿಗೆ ಪಾವತಿಯಿಂದ ದೇಶದಲ್ಲಿ ಅತ್ಯುನ್ನತ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರಕ್ಕೆ ಸಾಧ್ಯವಾಗಿದೆ. ದೇಶದ ಅಭ್ಯುದಯದ ದೃಷ್ಟಿಯಿಂದ ಆದಾಯ ಗಳಿಸುವ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಆದಾಯ ತೆರಿಗೆ ಪಾವತಿಸಬೇಕು ಎಂದರು.

ಪ್ರಾಂಶುಪಾಲ ವಿಜಯ್ ಇದ್ದರು. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಆದಾಯ ತೆರಿಗೆಯ ಮಹತ್ವದ ಕುರಿತು ಮಾಹಿತಿ ಪಡೆದುಕೊಂಡರು. ಆದಾಯ ತೆರಿಗೆ ಇಲಾಖೆಯ ಸಿಬ್ಬಂದಿ ಸಂಭ್ರಮ್ ನಿರೂಪಿಸಿದರು.