ಮಡಿಕೇರಿ: 22ರಂದು ದಲಿತ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಉದ್ಘಾಟನೆ

| Published : Sep 18 2024, 01:45 AM IST

ಸಾರಾಂಶ

ದಲಿತ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭ ಹಾಗೂ ಕನ್ನಡ ಭಾಷಾ ಬೋಧಕರಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರ 22ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ದಲಿತ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅರ್ಜುನ್ ಮೌರ್ಯ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ದಲಿತ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕ ಉದ್ಘಾಟನಾ ಸಮಾರಂಭ ಹಾಗೂ ಕನ್ನಡ ಭಾಷಾ ಬೋಧಕರಿಗೆ ಜಿಲ್ಲಾ ಮಟ್ಟದ ಕಾರ್ಯಾಗಾರ 22ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ದಲಿತ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅರ್ಜುನ್ ಮೌರ್ಯ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದ ಸಭಾಂಗಣದಲ್ಲಿ ಅಂದು ಬೆಳಗ್ಗೆ 10ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ ಉದ್ಘಾಟಿಸುವರು. ದಲಿತ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಡಾ.ಅರ್ಜುನ್ ಗೋಳಸಂಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು ವಿಶ್ವವಿದ್ಯಾನಿಯಲದ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಎಸ್.ನರೇಂದ್ರ ಕುಮಾ‌ರ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ‘ಕನ್ನಡ ಸಾಹಿತ್ಯದಲ್ಲಿ ಪರಿವರ್ತನೆಯ ಹೆಗ್ಗುರುತುಗಳು’ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದರು.

ದಲಿತ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಘಟಕದ ವತಿಯಿಂದ ಯಾವುದೇ ಜಾತಿ, ವರ್ಗಕ್ಕೆ ಮಿಸಲಾಗದೆ ದಲಿತ ಬಂಡಾಯಕ್ಕೆ ಸೇರಿದ, ವಚನ ಸಾಹಿತ್ಯದ ಕುರಿತು ಕ್ರೀಯಾಶೀಲ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಹೆಚ್ಚಿನ ಮಾಹಿತಿಗೆ 9448600644, 9449933238 ಸಂಪರ್ಕಿಸಬಹುದು ಎಂದರು.

ಘಟಕದ ನಿರ್ದೇಶಕ ಜಯಪ್ಪ ಹಾನಗಲ್, ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಕೆ.ಜಿ.ರಮ್ಯ, ಕುಶಾಲನಗರ ತಾಲೂಕು ಅಧ್ಯಕ್ಷೆ ಅಲುಮೇಲು ವಿನೋದ್ ಸುದ್ದಿಗೋಷ್ಠಿಯಲ್ಲಿದ್ದರು.