ಸಾರಾಂಶ
ಸಮೀಕ್ಷೆ ಕಾರ್ಯದಲ್ಲಿ ನಗರಸಭೆ ಸದಸ್ಯರಾದ ಮೇರಿ ವೆಜಿಲ್ ಪಾಲ್ಗೊಂಡು, ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸುವಂತೆ ಜನರಿಗೆ ಕರೆ ನೀಡಿ, ನಗರಸಭೆಯಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ತ್ಯಾಗರಾಜ ಕಾಲೋನಿ ಮತ್ತು ಗದ್ದಿಗೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮನೆ ಮನೆಗೆ ತೆರಳಿ ಜ್ವರ ಸಮೀಕ್ಷೆ ನಡೆಸಿ ಜನರಲ್ಲಿ ಸಾಂಕ್ರಾಮಿಕ ರೋಗಗಳ ಜಾಗೃತಿ ಮೂಡಿಸುವ ಕಾರ್ಯಕ್ರಮ ಶುಕ್ರವಾರ ನಡೆಯಿತು.ಸಮೀಕ್ಷೆ ಕಾರ್ಯದಲ್ಲಿ ನಗರಸಭೆ ಸದಸ್ಯರಾದ ಮೇರಿ ವೆಜಿಲ್ ಪಾಲ್ಗೊಂಡು, ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸುವಂತೆ ಜನರಿಗೆ ಕರೆ ನೀಡಿ, ನಗರಸಭೆಯಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದರು.ಜಿಲ್ಲಾ ಎಂಟಮಾಲಿಜಿಸ್ಟ್ ಮಂಜುನಾಥ್ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡರೆ ಡೆಂಘಿ, ಇಲಿ ಜ್ವರ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ. ಯಾವುದೇ ಜ್ವರವಿರಲಿ ಹತ್ತಿರದ ಆಸ್ಪತ್ರೆಯ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಕೃತಾ, ಪ್ರತಿ ಮನೆಯ ಮುಂದಿನ ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮನೆಯ ಒಳಗೆ ಮತ್ತು ಹೊರಗೆ ನೀರು ತುಂಬಿಸುವ ತಾಣಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಲು ತಿಳಿಸಿದರು.ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಮಾತನಾಡಿ, ನಗರ ಪ್ರದೇಶಗಳಲ್ಲಿ ಮೊದಲನೇ ಮತ್ತು ಮೂರನೇ ಶುಕ್ರವಾರ ಇಲಾಖಾ ನಿಯಮದಂತೆ ಪ್ರತಿ ವಾರ್ಡುಗಳಲ್ಲಿ ಲಾರ್ವಾ ಸಮೀಕ್ಷೆ ನಡೆಸಿ ಜನರಲ್ಲಿ ಅರಿವು ಮೂಡಿಸುವ ಕೆಲಸ ತಾಲೂಕಿನ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ನಗರ ಆಶಾ ಕಾರ್ಯಕರ್ತರು ನಿರ್ವಹಿಸುತ್ತಿರುವುದಾಗಿ ತಿಳಿಸಿದರು.ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ ಮಾತನಾಡಿ, ಪ್ರತಿ ಶುಕ್ರವಾರದಂದು ಎಲ್ಲರೂ ನೀರಿನ ತಾಣಗಳನ್ನು ಶುಚಿಗೊಳಿಸುವ ಮೂಲಕ ರೋಗಗಳ ನಿಯಂತ್ರಣಕ್ಕೆ ಮುಂದಾಗುವಂತೆ ಸೂಚಿಸಿದರು.