ಚೆಸ್ಕಾಂ ಕಚೇರಿಗೆ ಮುತ್ತಿಗೆ : ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಎಚ್ಚರಿಕೆ

| Published : May 23 2025, 12:57 AM IST

ಸಾರಾಂಶ

ಅನಿಯಮಿತ ವಿದ್ಯುತ್ ಕಡಿತಗೊಳಿಸುತ್ತಿರುವ ಕ್ರಮವನ್ನು ವಿರೋಧಿಸಿ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಮಡಿಕೇರಿ ನಗರ ಚೇಂಬರ್‌ ಆಫ್‌ ಕಾಮರ್ಸ್‌ ಎಚ್ಚರಿಕೆ ನೀಡಿದೆ.

ಮಡಿಕೇರಿ : ವಿದ್ಯುತ್ ಮಾರ್ಗದ ದುರಸ್ತಿ ಮತ್ತು ನಿರ್ವಹಣೆಯ ನೆಪದಲ್ಲಿ ಅನಿಯಮಿತ ವಿದ್ಯುತ್ ಕಡಿತಗೊಳಿಸುತ್ತಿರುವ ಕ್ರಮವನ್ನು ವಿರೋಧಿಸಿ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಎಚ್ಚರಿಕೆ ನೀಡಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್ನ ನಗರಾಧ್ಯಕ್ಷ ಸಂತೋಷ್ ಅನ್ವೇಕರ್ ಅವರು ಕಳೆದ ನಾಲ್ಕೈದು ದಿನಗಳಿಂದ ಯಾವುದೇ ಮಾಹಿತಿ ನೀಡದೆ ಗಂಟೆಗಟ್ಟಲೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಇದರಿಂದ ವರ್ತಕರಿಗೆ ಭಾರೀ ನಷ್ಟವಾಗುತ್ತಿದೆ ಮತ್ತು ಸಾರ್ವಜನಿಕರ ಕೆಲಸ, ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ಮಾರ್ಗದ ದುರಸ್ತಿ ಮತ್ತು ನಿರ್ವಹಣೆಯ ಕಾರಣ ನೀಡಿ ವ್ಯಾಪಾರದ ಸಂದರ್ಭದಲ್ಲೇ ವಿದ್ಯುತ್ ಕಡಿತ ಮಾಡಲಾಗುತ್ತಿದ್ದು, ವ್ಯಾಪಾರಸ್ಥರು ಕಷ್ಟ, ನಷ್ಟ ಅನುಭವಿಸುತ್ತಿದ್ದಾರೆ. ಸಮಸ್ಯೆಯನ್ನು ಶೀಘ್ರ ಬಗೆಹರಿಸಿ ಅನಿಯಮಿತ ವಿದ್ಯುತ್ ಕಡಿತಕ್ಕೆ ಕಡಿವಾಣ ಹಾಕದಿದ್ದಲ್ಲಿ ಚೇಂಬರ್ ಆಫ್ ಕಾಮರ್ಸ್ ನೇತೃತ್ವದಲ್ಲಿ ಸಮಸ್ತ ವರ್ತಕರು ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

----------------------------------------

ತಾ.ಪಂ.ಕೆಡಿಪಿ ಸಭೆ ಮುಂದೂಡಿಕೆ

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಮೇ 23 ರಂದು ನಡೆಯಬೇಕಿದ್ದ ಮಡಿಕೇರಿ ತಾಲೂಕಿನ ತ್ರೈಮಾಸಿಕ ಕೆಡಿಪಿ ಸಭೆಯನ್ನು ಮುಂದೂಡಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ತಿಳಿಸಿದ್ದಾರೆ.