ಸಾರಾಂಶ
ಮೈಸೂರು ಸಂಸ್ಥಾನದಲ್ಲಿ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನವನ್ನು ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕ ವತಿಯಿಂದ ಸರಳವಾಗಿ ಆಚರಿಸಲಾಯಿತು. ಮಡಿಕೇರಿ ಜಿಲ್ಲಾ ಕ.ಸಾ.ಪ. ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಕಸಾಪ ಪದಾಧಿಕಾರಿಗಳು ಪುಷ್ಪಾರ್ಚನೆ ನೆರವೇರಿಸಿ ಗೌರವ ಅರ್ಪಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮೈಸೂರು ಸಂಸ್ಥಾನದಲ್ಲಿ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನವನ್ನು ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕ ವತಿಯಿಂದ ಸರಳವಾಗಿ ಆಚರಿಸಲಾಯಿತು.ನಗರದ ಜಿಲ್ಲಾ ಕ.ಸಾ.ಪ. ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಕಸಾಪ ಪದಾಧಿಕಾರಿಗಳು ಪುಷ್ಪಾರ್ಚನೆ ನೆರವೇರಿಸಿ ಗೌರವ ಅರ್ಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕನ್ನಡ, ನಾಡು-ನುಡಿಗೆ ಮೈಸೂರು ಸಂಸ್ಥಾನದಲ್ಲಿ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ ಎಂದು ಕೊಂಡಾಡಿದರು.ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಅಧಿಕಾರ ಅವಧಿಯಲ್ಲಿ ಹೆಚ್ಚಿನ ಕಾಳಜಿ ವಹಿಸಿ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ ಎಂದು ಟಿ.ಪಿ.ರಮೇಶ್ ವಿವರಿಸಿದರು.
ಸರ್ವರಿಗೂ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶ್ರಮಿಸಿದ್ದಾರೆ. ರಾಜರ ಆಡಳಿತದ ಮೂಲಕ ಜನಸಾಮಾನ್ಯರ ಬದುಕಿಗೆ ಸಾಧ್ಯವಾದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಇಂದಿಗೂ ಸಹ ಜನಮನದಲ್ಲಿ ಉಳಿದಿದ್ದಾರೆ ಎಂದು ಟಿ.ಪಿ.ರಮೇಶ್ ನುಡಿದರು.ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ, ನಾಡಿನ ಸಂಸ್ಕೃತಿ, ಕಲೆ, ಪರಂಪರೆ ಉಳಿಸಿ ಬೆಳೆಸಲು ನಾಲ್ವಡಿ ಕೃಷ್ಣರಾಜ ಒಡೆಯರ್ ಶ್ರಮಿಸಿದ್ದಾರೆ ಎಂದರು.
ಮಡಿಕೇರಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿ, ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ ಗೌರವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದರು.ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ಲು ನವೀನ್ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಸಂಪತ್ ಕುಮಾರ್, ಕಸಾಪ ಕುಶಾಲನಗರ ತಾಲೂಕು ಘಟಕ ಅಧ್ಯಕ್ಷ ನಾಗೇಶ್, ನಿರ್ದೇಶಕ ಪ್ರೇಮ್ ಕುಮಾರ್, ಶ್ರೀಧರ ಹೂವಳ್ಳಿ, ಮೂರ್ನಾಡು ಬ್ಲಾಕ್ ಅಧ್ಯಕ್ಷರಾದ ಹರಿಣಿ ವಿಜಯ್, ಸೋಮಶೇಖರ, ಎಂ.ಎನ್.ಮೂರ್ತಿ, ರೇಣುಕಾ ಮತ್ತಿತರರು ಇದ್ದರು.