ಮಡಿಕೇರಿ: ರಸ್ತೆ ಸುರಕ್ಷತಾ ಜಾಥಾ

| Published : Mar 01 2025, 01:02 AM IST

ಸಾರಾಂಶ

ನಗರದ ಜಿ.ಟಿ.ವೃತ್ತದಿಂದ ಆರಂಭಗೊಂಡ ಜಾಥಾದಲ್ಲಿ ಸಾರ್ವಜನಿಕರು ಮತ್ತು ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಾಥಾವು ಐಜಿ ವೃತ್ತದಲ್ಲಿ ಕೊನೆಗೊಂಡಿತ್ತು. ಈ ಸಂದರ್ಭ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಡಿಕೇರಿ ನಗರ ಸಂಚಾರ ಠಾಣೆ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ಸ್ ಜಂಟಿ ಸಹಯೋಗದೊಂದಿಗೆ ಮಡಿಕೇರಿ ನಗರದಲ್ಲಿ ರಸ್ತೆ ಸುರಕ್ಷತಾ ಜಾಥಾ ಮತ್ತು ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ ನಗರದ ಮೈತ್ರಿ ಪೊಲೀಸ್‌ ಸಮುದಾಯ ಭವನದಲ್ಲಿ ಶುಕ್ರವಾರ ನಡೆಯಿತು.

ನಗರದ ಜಿ.ಟಿ.ವೃತ್ತದಿಂದ ಆರಂಭಗೊಂಡ ಜಾಥಾದಲ್ಲಿ ಸಾರ್ವಜನಿಕರು ಮತ್ತು ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಾಥಾವು ಐಜಿ ವೃತ್ತದಲ್ಲಿ ಕೊನೆಗೊಂಡಿತ್ತು. ಈ ಸಂದರ್ಭ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು.

ನಂತರ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಸಂಚಾರ ಸುರಕ್ಷತಾ ಅರಿವು ಕಾರ್ಯಕ್ರಮದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳೊಂದಿಗೆ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರಶ್ನೋತ್ತರ ರೂಪದಲ್ಲಿ ಸಂವಾದ ನಡೆಸಿ ಜಾಗೃತಿ ಮೂಡಿಸಲಾಯಿತು.

ನಂತರ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ.ಮಹೇಶ್ ಎಸ್.ಎಚ್‌, ಸಂಚಾರ ಸುರಕ್ಷತೆಯ ಬಗ್ಗೆ ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಕೆ.ಎಸ್., ಫೀ.ಮಾ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ಕ್ಲಬ್ ಮಹೀಂದ್ರ ಸಂಸ್ಥೆಯ ಶಕ್ತಿಧರನ್ ಎಸ್., ಕೊಶ್ರಾಜ್ ಗುರಂಗ್ ಮತ್ತು ಇನ್ನಿತರ ಗಣ್ಯರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಸಂಚಾರ ಸುರಕ್ಷತೆಗೆ ಸಂಬಂಧಿಸಿದ ಭಿತ್ತಿಪತ್ರಗಳನ್ನು ಅನಾವರಣಗೊಳಿಸಲಾಯಿತು.