ಮಡಿಕೇರಿ: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

| Published : Aug 13 2024, 12:49 AM IST

ಮಡಿಕೇರಿ: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ 2021-22, 2022-23 ಮತ್ತು 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ನಗರದ ಕೊಡಗು ಗೌಡ ಸಮಾಜದಲ್ಲಿ ಜರುಗಿತು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ 2021-22, 2022-23 ಮತ್ತು 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಿತು.ಈ ಸಂದರ್ಭ ಸಂಘದ ಅಧ್ಯಕ್ಷ ಪೊಣ್ಣಚ್ಚನ ಶ್ರೀನಿವಾಸ ಮಾತನಾಡಿ, 5 ವರ್ಷದ ಕಾಲಾವಧಿಯಲ್ಲಿ ಸರ್ವ ಸದಸ್ಯರ ಪ್ರಯತ್ನದ ಫಲವಾಗಿ ಸಂಘದ ಹೆಸರಿಗೆ ನಿವೇಶನ ಕಾಯ್ದಿರಿಸಲಾಗಿದೆ ಎಂದರು.ರಾಜ್ಯ ಸಂಘದ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಜಾರಿ, ಕ್ರೀಡಾಕೂಟ ಆಯೋಜನೆ, ಹಾಗೆಯೇ ಮುಖ್ಯಮಂತ್ರಿಯವರು ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಅಭಿನಂದನಾ ಸಮಾರಂಭವು ರಾಜ್ಯಮಟ್ಟದಲ್ಲಿ ಆ.17ರಂದು ಬೆಂಗಳೂರಿನಲ್ಲಿ ನಡೆಯುವ ಬಗ್ಗೆ ಮಾಹಿತಿ ನೀಡಿದರು.ಕ.ರಾ.ಸ.ನೌ. ಸಂಘದ ರಾಜ್ಯ ಖಜಾಂಚಿ ಡಾ.ಎಸ್.ಸಿದ್ದರಾಮಣ್ಣ ಮಾತನಾಡಿ, ರಾಜ್ಯ ಸಂಘ ಬೆಳೆದು ಬಂದ ಹಾದಿ ಹಾಗೂ 7ನೇ ವೇತನ ಆಯೋಗದ ರೂಪುರೇಷೆಗಳ ಬಗ್ಗೆ ಸವಿವರವಾಗಿ ತಿಳಿಸಿದರು.ಈ ದಿನ 203 ವಿದ್ಯಾರ್ಥಿ/ನಿಯರಿಗೆ, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನೆ ಸಲ್ಲಿಸಲಾಯಿತು.ಈ ಸಂದರ್ಭ ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಅನಿಸಿಕೆ ಹಂಚಿಕೊಳ್ಳಲು ಅವಕಾಶ ನೀಡಿದಾಗ ಕಲಿತ ಶಾಲೆ, ಗುರುಗಳ ಮಾರ್ಗದರ್ಶನ, ಪೋಷಕರ ಸಮರ್ಪಣಾ ಭಾವ, ಅವಿರತ ಕಲಿಕೆಯ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿಬಂದವು.ಸೋಮವಾರಪೇಟೆ ತಾಲೂಕು ಅಧ್ಯಕ್ಷ ಪ್ರದೀಪ್ ಮತ್ತು ವಿರಾಜಪೇಟೆ ತಾಲೂಕು ಅಧ್ಯಕ್ಷ ಗುರುರಾಜ್, ಕೊಡಗು ಗೌಡ ಸಮಾಜ ಅಧ್ಯಕ್ಷ ಪೇರಿಯನ ಜಯಾನಂದ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಸಿ.ಟಿ.ಸೋಮಶೇಖರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಸದಾಶಿವ ಪಲ್ಲೆದ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ವೈದ್ಯರಾದ ಡಾ.ನವೀನ್ ಮತ್ತು ಡಾ.ರಾಜೇಶ್ವರಿ, ಆರೋಗ್ಯ ಇಲಾಖೆಯ ರೋಹಿಣಿ, ಆರೋಗ್ಯ ಇಲಾಖೆಯ ಜಿಲ್ಲಾಧ್ಯಕ್ಷ ರಾಜೇಶ್, ವಾಹನ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಬಾಬು, ಎಲ್ಲ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.ಜಿಲ್ಲಾ ಉಪಾಧ್ಯಕ್ಷರಾದ ಚಿತ್ರಾವತಿ ಬಿ.ಐ. ಪ್ರಾರ್ಥಿಸಿದರು. ಗುರುರಾಜ್ ಸ್ವಾಗತಿಸಿದರು. ಪ್ರದೀಪ್ ವಂದಿಸಿದರು. ಪ್ರೌಢ ಶಾಲಾ ಶಿಕ್ಷಕರಾದ ಅನಿತಾ ನಿರೂಪಿಸಿದರು.