ಮಡಿಕೇರಿ: ತಾಲೂಕುಮಟ್ಟದ ಪದವಿಪೂರ್ವ ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ

| Published : Sep 19 2025, 01:02 AM IST

ಸಾರಾಂಶ

ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಡಗು ಹಾಗೂ ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಚೆರಿಯಪರಂಬುವಿನ ಕ್ರೀಡಾಂಗಣದಲ್ಲಿ 2025-26ನೇ ಸಾಲಿನ ಮಡಿಕೇರಿ ತಾಲೂಕುಮಟ್ಟದ ಪದವಿಪೂರ್ವ ಕಾಲೇಜು ಬಾಲಕ, ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಜೀವನದಲ್ಲಿ ಹೋರಾಡುವ ಶಕ್ತಿ ಕ್ರೀಡಾಂಗಣದಲ್ಲಿ ಸಿಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಲ್.ಚಿದಾನಂದ ಕುಮಾರ್ ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಡಗು ಹಾಗೂ ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಚೆರಿಯಪರಂಬುವಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2025-26ನೇ ಸಾಲಿನ ಮಡಿಕೇರಿ ತಾಲೂಕುಮಟ್ಟದ ಪದವಿಪೂರ್ವ ಕಾಲೇಜು ಬಾಲಕ, ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕ್ರೀಡೆ ಒಂದು ಗುರುವಿನ ಹಾಗೆ. ಸೋಲು ಗೆಲುವೆಂಬ ಸಮಬಾಳ್ವೆಯ ಪಾಠವನ್ನು ಕಲಿಸುತ್ತದೆ ಎಂದರು.

ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಎನ್. ಎಸ್.ಉದಯಶಂಕರ್ ಅಧ್ಯಕ್ಷತೆ ವಹಿಸಿ ಕ್ರೀಡಾಕೂಟ ಉದ್ಘಾಟಿಸಿದರು.

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಪಥಸಂಚಲನದ ಮೂಲಕ ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಉಪನ್ಯಾಸಕ ಗಗನ್, ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು.ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿಶಾಲ ಕುಶಾಲಪ್ಪ, ಮಡಿಕೇರಿ ತಾಲೂಕುವಿನ ವಿವಿಧ ಪದವಿ ಪೂರ್ವ ಕಾಲೇಜುಗಳ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.