ಮಡಿಕೇರಿ: ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

| Published : Aug 24 2024, 01:16 AM IST

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಷನ್ ಶಕ್ತಿ ಯೋಜನೆಯಡಿ ಬೇಟಿ ಪಡಾವೋ-ಬೇಟಿ ಬಚಾವೋ ಜಿಲ್ಲಾ ಮಟ್ಟದ ಕಾರ್ಯಕ್ರಮದ ಪ್ರಯುಕ್ತ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರಿಗೆ ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಾನವ ಕಳ್ಳ ಸಾಗಾಣಿಕೆ ಪಿಡುಗಿನಿಂದ ಸಾಮಾನ್ಯ ಮಹಿಳೆಯರಿಗೆ ಸಮಾಜದಲ್ಲಿ ಜೀವನ ನಡೆಸಲು ಸಮಸ್ಯೆ ಸೃಷ್ಟಿಸುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಹೇಳಿದ್ದಾರೆ.

2024-25 ನೇ ಸಾಲಿನ ಮಿಷನ್ ಶಕ್ತಿ ಯೋಜನೆಯಡಿ ಬೇಟಿ ಪಡಾವೋ-ಬೇಟಿ ಬಚಾವೋ ಜಿಲ್ಲಾ ಮಟ್ಟದ ಕಾರ್ಯಕ್ರಮದ ಪ್ರಯುಕ್ತ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರಿಗೆ ನಡೆದ ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಿದರು.

ಕಳ್ಳ ಸಾಗಾಣಿಕೆಯಿಂದ ಮಹಿಳೆಯರನ್ನು ಬೇರೆ ಬೇರೆ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದ್ದು, ಕೆಲವು ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅವರಿಗೆ ನೆರವು ನೀಡುವುದು, ಉತ್ತಮ ಸೌಲಭ್ಯವನ್ನು ಕಲ್ಪಿಸುವ ಅಗತ್ಯ ಇದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡುವುದು ಬೇರೆ ಬೇರೆ ಉದ್ದೇಶಗಳಿಗೆ ಅವರನ್ನು ಮಾರಾಟಮಾಡುವುದು, ಅವರನ್ನು ಬಲವಂತವಾಗಿ ದುಡಿಮೆಗಳಲ್ಲಿ ದುಡಿಸಿಕೊಳ್ಳುವುದು, ಅಥವಾ ಅಪಾಯದ ಸ್ಥಳಗಳಲ್ಲಿ ಕೆಲಸ ಮಾಡುವಂತದ ಬಾಲ ಕಾರ್ಮಿಕರಾಗಿ ದುಡಿಸುವಂತದ್ದು, ಬಿಕ್ಷಾಟಣೆಗೆ ಮಕ್ಕಳನ್ನು ಅಥವಾ ಹಿರಿಯ ಜೀವಗಳನ್ನು ಬಿಡುವಂತದ್ದು, ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡಿ, ಬೇರೆ ಬೇರೆ ಉದ್ದೇಶಗಳಿಗೆ ಅವರನ್ನು ಮಾರಾಟಮಾಡಲಾಗುತ್ತಿದೆ ಎಂದು ತಿಳಿಸಿದರು.

ಅವರು ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದರು.

ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕ ಸಿರಾಜ್ ಮಾತನಾಡಿ, ಇಂದು ಬಾಲ ಕಾರ್ಮಿಕ ಪದ್ಧ್ದತಿ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮ ಆಯೋಜಿಸುವುದರ ಜೊತೆಗೆ ಕ್ರಿಯಾ ಯೋಜನೆಗಳನ್ನು ರೂಪಿಸಿದ್ದು, ತಂಡಗಳನ್ನು ರಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಣತೊಟ್ಟಿದ್ದು. ಸಾರ್ವಜನಿಕರು ಈ ಕುರಿತು ಜಾಗೃತರಾಗಬೇಕು ಎಂದು ತಿಳಿಸಿದರು.

ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತ ಕಿರಣ್, ಕಾರ್ಮಿಕ ಮಂಡಳಿ ಎಕ್ಸಿಕ್ಯೂಟಿವ್ ಪ್ರಸನ್ನ ಹಾಜರಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿದರು, ಕೇಶಿನಿ ಎಸ್.ಆರ್. ಪ್ರಾರ್ಥಸಿ, ಸ್ವಾಗತಿಸಿದರು.