ಮಡಿವಾಳ ಜನಾಂಗದವರು ಒಗ್ಗಟ್ಟು ಪ್ರದರ್ಶಿಸಿ

| Published : Feb 02 2025, 01:01 AM IST

ಸಾರಾಂಶ

ಮಡಿವಾಳ ಜನಾಂಗದವರು ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಶಾಸಕ ಎಚ್‌.ಪಿ. ಸ್ವರೂಪ್‌ ಹೇಳಿದರು. ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. . ಮಡಿವಾಳದವರು ರಾಜಕೀಯವಾಗಿ ಹಾಗೂ ನೌಕರಿಗೆ ಸಂಬಂಧಪಟ್ಟಂತೆ ಮತ್ತು ಮೀಸಲಾತಿಗೆ ಸಂಬಂಧಿಸಿದಂತೆ ಹೋರಾಟವನ್ನು ಮಾಡುವ ಮೂಲಕ ತಮಗೆ ಸಿಗಬೇಕಾದ ಹಕ್ಕನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನಮಡಿವಾಳ ಜನಾಂಗದವರು ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಶಾಸಕ ಎಚ್‌.ಪಿ. ಸ್ವರೂಪ್‌ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.ಪ್ರತಿ ಸಮಾಜದಲ್ಲೂ ಸಹ ವೈಶಿಷ್ಟ್ಯತೆ ಮತ್ತು ಒಗ್ಗಟ್ಟನ್ನು ತೋರಿಸುವ ಸಂದರ್ಭದಲ್ಲಿ ಈ ಸಮಾಜದವರು ಇನ್ನಷ್ಟು ಒಗ್ಗಟ್ಟನ್ನು ಪ್ರದರ್ಶಿಸಬೇಕಾಗಿದೆ. ಮಡಿವಾಳದವರು ರಾಜಕೀಯವಾಗಿ ಹಾಗೂ ನೌಕರಿಗೆ ಸಂಬಂಧಪಟ್ಟಂತೆ ಮತ್ತು ಮೀಸಲಾತಿಗೆ ಸಂಬಂಧಿಸಿದಂತೆ ಹೋರಾಟವನ್ನು ಮಾಡುವ ಮೂಲಕ ತಮಗೆ ಸಿಗಬೇಕಾದ ಹಕ್ಕನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ, ಗೌರವಾಧ್ಯಕ್ಷ ಈ. ಕೃಷ್ಣೇಗೌಡ, ಮಡಿವಾಳ ಮಾಚಿದೇವ ಸಂಘದ ರಾಜ್ಯಾಧ್ಯಕ್ಷೆ ವಿಜಯಲಕ್ಷ್ಮಿ ಅಂಜನಪ್ಪ, ಜಿಪಂ ಉಪ ಕಾರ್ಯದರ್ಶಿ ಚಂದ್ರಶೇಖರ್‌, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕ ಎಚ್.ಪಿ. ತಾರನಾಥ್, ಗೊರೂರು ಶಿವೇಶ್, ನಿರ್ದೇಶಕ ಮಲ್ಲೇಶ್, ಮುರುಳಿ, ಗೋವಿಂದಪ್ಪ, ರಘು ಇದ್ದರು.