ಮಧ್ಯ ದಕ್ಷಿಣ ಕನ್ನಡ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಮೂಲ್ಕಿ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಜೀವನವನ್ನು ರೂಪಿಸುವಂತಹ ಶಿಕ್ಷಣವನ್ನು ಕಲಿಯಬೇಕೆಂದು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಹೇಳಿದರು.

ಮಧ್ಯ ದಕ್ಷಿಣ ಕನ್ನಡ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಚೇಳೈರು ಗ್ರಾಪಂ ಅಧ್ಯಕ್ಷ ಜಯಾನಂದ ಅಧ್ಯಕ್ಷತೆ ವಹಿಸಿದ್ದು, ಸುರತ್ಕಲ್ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ರಮೇಶ್ ರಾವ್, ಉದ್ಯಮಿ ಗಿರೀಶ್ ಎಂ. ಶೆಟ್ಟಿ ಕಟೀಲು, ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಸುರತ್ಕಲ್ ಜೆಸಿಐ ಸಂಸ್ಥೆಯ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಸೀತಾರಾಮ ರೈ, ಮಧ್ಯ ಕುಲ್ಲಂಗಾಲು ಚಾಮುಂಡೇಶ್ವರಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ರಮೇಶ್ ಶೆಟ್ಟಿ, ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ರಾಜ್ ಮೋಹನ್ ರಾವ್, ಕಾರ್‍ಯದರ್ಶಿ ಸತೀಶ್ ಸದಾನಂದ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ, ಉಪಾಧ್ಯಕ್ಷ ಅನಿಲ್ ಸಾಲ್ಯಾನ್ ಸೂರಿಂಜೆ, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್, ಕೋಶಾಧಿಕಾರಿ ವಿಠಲ ಶೆಟ್ಟಿ, ಸದಸ್ಯರಾದ ಪ್ರಕಾಶ್ ಶೆಟ್ಟಿ ಕುಲ್ಲಂಗಾಲು, ಬಾಲಕೃಷ್ಣ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಕಾವ್ಯ, ಶಶಿಕಲಾ, ಕುಸುಮಾಕರ ಶೆಟ್ಟಿ, ದಿನೇಶ್ ಕುಲ್ಲಂಗಾಲು, ಹರೀಶ್ ಭಂಡಾರಿ, ಸುದೀರ್ ಭಟ್, ಪರಮೇಶ್ವರ್, ಸವಿತಾ ಕುಲಾಲ್, ಕೇಶವ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ದೇವಾಡಿಗ, ರಿತೇಶ್ ಶೆಟ್ಟಿ ಮಧ್ಯ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಮಧ್ಯ ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಜೇನ್ ಡಿಸೋಜ ವಂದಿಸಿದರು. ಸಹ ಶಿಕ್ಷಕಿ ಶೈಲಾ ನಿರೂಪಿಸಿದರು.