ಅಕ್ಟೋಬರ್‌ 3ರಿಂದ 14 ಕುದ್ರೋಳಿಯಲ್ಲಿ ವೈಭವದ ಮಂಗಳೂರು ದಸರಾ

| Published : Aug 25 2024, 01:54 AM IST

ಸಾರಾಂಶ

ಈ ಬಾರಿಯ ದಸರಾವನ್ನು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ‘ಮಂಗಳೂರು ದಸರಾ’ವನ್ನು ಕೇಂದ್ರದ ಮಾಜಿ ಸಚಿವ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅವರ ಮಾರ್ಗದರ್ಶನವನ್ನು ವೈಭವಯುತವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್ ತಿಳಿಸಿದ್ದಾರೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶನಿವಾರ ನಡೆದ ಆಡಳಿತ ಮಂಡಳಿ ಸಭೆಯ ಬಳಿಕ ಅವರು ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ.ಮಂಗಳೂರು ದಸರಾ ವರ್ಷದಿಂದ ವರ್ಷಕ್ಕೆ ವೈಭವಯುತವಾಗಿ ನಡೆಯುತ್ತಿದ್ದು, ನಾಡಿನಲ್ಲೇ ಮೈಸೂರು ಬಳಿಕ ಮಹಾಉತ್ಸವವಾಗಿ ರೂಪುಗೊಂಡಿದೆ. ಇದಕ್ಕೆ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಸೇರಿದಂತೆ ಸಾರ್ವಜನಿಕರ ಸಹಕಾರ ಕಾರಣವಾಗಿದೆ. ಈ ಬಾರಿ ಅ.೩ರಂದು ಆರಂಭವಾಗುವ ಮಂಗಳೂರು ದಸರಾ ಅ.೧೪ರ ವರೆಗೆ ನಡೆಯಲಿದೆ. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಮಾರ್ಗದರ್ಶನ ಹಾಗೂ ಕ್ಷೇತ್ರದ ಟ್ರಸ್ಟಿಗಳು, ಅಭಿವೃದ್ಧಿ ಸಮಿತಿಯ ಸಲಹೆಗಳನ್ನು ಪಡೆದುಕೊಂಡು ಈ ಬಾರಿಯ ದಸರಾವನ್ನು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.ಸಭೆಯಲ್ಲಿ ದೇವಸ್ಥಾನದ ಉಪಾಧ್ಯಕ್ಷೆ ಉರ್ಮಿಳಾ ರಮೇಶ್ ಕುಮಾರ್, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಟ್ರಸ್ಟಿಗಳಾದ ಶೇಖರ್ ಪೂಜಾರಿ, ರವಿಶಂಕರ್ ಮಿಜಾರು, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ ಇದ್ದರು.