ಮಹಾದಾಯಿ ಜೋಡಣೆ ಜಿಲ್ಲೆಯ ಅಭಿವೃದ್ಧಿಗೆ ಪೂರಕ: ಪ್ರಕಾಶ ಅಂತರಗೊಂಡ

| Published : Mar 23 2025, 01:33 AM IST

ಮಹಾದಾಯಿ ಜೋಡಣೆ ಜಿಲ್ಲೆಯ ಅಭಿವೃದ್ಧಿಗೆ ಪೂರಕ: ಪ್ರಕಾಶ ಅಂತರಗೊಂಡ
Share this Article
  • FB
  • TW
  • Linkdin
  • Email

ಸಾರಾಂಶ

ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆ ಮಾಡುವುದರಿಂದ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಪೂರಕವಾಗಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಬೀಳಗಿಯ ಸಾಂಸ್ಕೃತಿಕ ಚಿಂತಕ ಪ್ರಕಾಶ ಅಂತರಗೊಂಡ ಆಶಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆ ಮಾಡುವುದರಿಂದ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಪೂರಕವಾಗಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಬೀಳಗಿಯ ಸಾಂಸ್ಕೃತಿಕ ಚಿಂತಕ ಪ್ರಕಾಶ ಅಂತರಗೊಂಡ ಆಶಯ ವ್ಯಕ್ತಪಡಿಸಿದರು.

ಬಾದಾಮಿ ತಾಲೂಕಿನ ನೀರಬೂದಿಹಾಳದಲ್ಲಿ ಹಮ್ಮಿಕೊಂಡಿರುವ ಬಾಗಲಕೋಟೆ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷ ಉಪನ್ಯಾಸ-1ರಲ್ಲಿ ನೀರಾವರಿ ಕ್ಷೇತ್ರದ ಹೊಸ ಸಾಧ್ಯತೆಗಳು ವಿಷಯ ಕುರಿತು ಮಾತನಾಡಿದರು.

ಮಲಪ್ರಭಾ ನದಿಗೆ ಮಹಾದಾಯಿ ನದಿ ಜೋಡಣೆ ಮಾಡುವುದಿರಂದ ಜಿಲ್ಲೆಯ ಬದಾಮಿ, ಹುನಗುಂದ ಹಾಗೂ ಇಳಕಲ್ಲ ತಾಲೂಕಿಗೆ ಹೆಚ್ಚಿನ ಅನುಕೂಲವಾಗಲಿದೆ. ಮತ್ತಷ್ಟು ನೀರಾವರಿ ಕ್ಷೇತ್ರ ಹೆಚ್ಚಳಗೊಳ್ಳಲು ಕಾರಣವಾಗುತ್ತದೆ. ಜಿಲ್ಲೆಯ ಜನಪ್ರತಿನಿಧಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮೇಲೆ ಒತ್ತಡ ಹಾಕಬೇಕು. ಜನಪ್ರತಿನಿಧಿಗಳು ಪಕ್ಷಭೇದ ಮರೆತು ಇಚ್ಛಾಶಕ್ತಿ ತೋರಬೇಕಾಗಿದೆ ಎಂದು ಹೇಳಿದರು.

ಆಲಮಟ್ಟಿ ಯೋಜನೆಯ ಹಿನ್ನೀರು ಬಳಸಿಕೊಳ್ಳಬೇಕಿದೆ. ಮಳೆ ನೀರು ಕೊಯ್ಲಿ ಅನುಷ್ಠಾನಗೊಳಿಸಬೇಕಿದೆ. ಜಿಲ್ಲೆಯಲ್ಲಿ ನೀರಾವರಿ ಯೋಜನೆ ಕೈಗೊಳ್ಳಲು ವಿಫುಲ ಅವಕಾಶಗಳಿವೆ. ಇಸ್ರೇಲ್ ಮಾದರಿಯಲ್ಲಿ ಹನಿ ನೀರಾವರಿಗೆ ಆದ್ಯತೆ ನೀಡಬೇಕಾಗಿದೆ ಎಂದು ಆಶಯ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಧ್ಯಾಪಕ ಪ್ರೊ. ಜಿ.ಬಿ.ಶೀಲವಂತರ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿನ ಸೌಲಭ್ಯವಿದೆ. ಹಾಗಾಗಿ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ಹೆಚ್ಚಿಸಿಕೊಳ್ಳಬೇಕಿದೆ ಎಂದರು. ವೀರಣ್ಣ ಶೆಟ್ಟರ ನಿರೂಪಿಸಿ, ವಂದಿಸಿದರು.