ಸಾರಾಂಶ
ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ. ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ
ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದರೆ ಕೇಂದ್ರ ಸರ್ಕಾರ ಸಹಕಾರ ಕೊಡುತ್ತಿಲ್ಲ ಜಲಸಂಪನ್ಮೂಲ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಷಾಧಿಸಿದರು.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಮಹದಾಯಿ ಯೋಜನೆ ಕಾಮಗಾರಿಗೆ ಪರವಾನಗಿ ಸಿಕ್ಕಿದೆ ಎಂದು ಬಿಜೆಪಿಯವರು ಹಿಂದೆ ಸಿಹಿಹಂಚಿ ವಿಜಯೋತ್ಸವ ಆಚರಿಸಿದ್ದರು. ಆದರೀಗ ಕೇಂದ್ರ ಸಚಿವ ಭೂಪೇಂದ್ರ ಯಾದವ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ. ಮಹದಾಯಿ ಯೋಜನೆಗೆ ಬೇಕಾದ ಅಗತ್ಯ ಪರವಾನಗಿಗಳನ್ನು ಕೇಂದ್ರ ಸರ್ಕಾರ ಕೊಡಬೇಕು ಎಂದು ಒತ್ತಾಯಿಸಿದರು.ಬಜೆಟ್ ಹೊಸ ದಿಕ್ಸೂಚಿ: ಈ ಬಾರಿಯ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿಯಾಗಲಿದೆ. ಆಶಾದಾಯಕ ಆಗಿಲಿರಲಿದೆ. ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಡಿ.ಕೆ.ಶಿವಕುಮಾರ ವಿಶ್ವಾಸ ವ್ಯಕ್ತಪಡಿಸಿದರು.
ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ. ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ನುಡಿದರು.ನಿಗಮ ಮಂಡಳಿಗಳಿಗೆ ಕಾರ್ಯಕರ್ತರ ನೇಮಕ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಜೆಟ್ ಬಳಿಕ ನೇಮಕ ಮಾಡಲಾಗುವುದು. ಯಾರೂ ಅಸಮಾಧಾನಗೊಂಡಿಲ್ಲ ಎಂದರು.
;Resize=(128,128))
;Resize=(128,128))
;Resize=(128,128))
;Resize=(128,128))