26 ರಂದು ಬೃಂದಾವನ ಬಡಾವಣೆಯ ಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ

| Published : Feb 22 2025, 12:45 AM IST

ಸಾರಾಂಶ

ಬೆಳಗ್ಗೆ 8.30ಕ್ಕೆ ಶಿವನಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, 10.30ಕ್ಕೆ ಮಹಾಮಂಗಳಾರತಿ,

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ಬೃಂದಾವನ ಬಡಾವಣೆಯ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ ನಿಂದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ. 26ರಂದು ಮಹಾಶಿವರಾತ್ರಿ ಅಂಗವಾಗಿ ಶ್ರೀ ಓಂಕಾರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಆಚರಿಸಲಿದೆ ಎಂದು ದೇವಸ್ಥಾನದ ಅಧ್ಯಕ್ಷರು, ಧರ್ಮದರ್ಶಿಗಳು ತಿಳಿಸಿದ್ದಾರೆ.

ಅಂದು ಬೆಳಗ್ಗೆ 8.30ಕ್ಕೆ ಶಿವನಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, 10.30ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗವಾಗಲಿದೆ.

ಸಂಜೆ 6.30ಕ್ಕೆ ಪ್ರತಮ ಯಾಮದ ಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭೇಕ, 8.30ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗವಾಗಲಿದೆ. ರಾತ್ರಿ 9.15ಕ್ಕೆ ಎರಡನೇ ಯಾಮದ ಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, 11.15ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗವಾಗಲಿದೆ.

ಮಧ್ಯ ರಾತ್ರಿ 12.15ಕ್ಕೆ ಮೂರನೇ ಯಾಮದ ಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, 2.30ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋವಾಗಲಿದೆ.

ಫೆ. 27ರ ಬೆಳಗಿನ ಜಾವ 4.30ಕ್ಕೆ ನಾಲ್ಕನೇ ಯಾಮದ ಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ವಿಶೇಷ ಶಾಲ್ಯಾನ್ನ ಅಭಿಷೇಕ ನೆರವೇರಲಿದೆ.

ಬೆಳಗ್ಗೆ 7ಕ್ಕೆ ವಿಶೇಷ ಪ್ರಾಕಾರೋತ್ಸವ, 8ಕ್ಕೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗವಾಗಲಿದೆ ಎಂದು ಅವರು ತಿಳಿಸಿದ್ದಾರೆ.

-----------------