ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ

| Published : Aug 15 2024, 01:55 AM IST

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ಇದರ 2023- 2024ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8ನೇ ಬಾರಿಗೆ ಲಭಿಸಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಇದರ 2023-24 ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 8 ನೇ ಬಾರಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ. ಎಂ . ಎನ್. ರಾಜೇಂದ್ರ ಕುಮಾರ್ ಅವರಿಂದ ಬ್ಯಾಂಕಿನ ಅಧ್ಯಕ್ಷರಾದ, ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹಾಗೂ ಉಪಾಧ್ಯಕ್ಷ ವಾಸುದೇವ ಸಾಲ್ಯಾನ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ರಧಾನ ವ್ಯವಸ್ಥಾಪನಾ ನಿರ್ದೇಶಕ ಶರತ್ ಕುಮಾರ್ ಶೆಟ್ಟಿ ಎನ್. ಉಪಸ್ಥಿತರಿದ್ದರು.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಯಶ್‌ಪಾಲ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ಗ್ರಾಹಕರಿಗೆ ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳ ಸೇವೆಯೊಂದಿಗೆ ವ್ಯವಹಾರ ನಡೆಸುತ್ತಿದ್ದು, ಕಳೆದ 14 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ ಅತೀ ಹೆಚ್ಚು ಡಿವಿಡೆಂಡ್ ನೀಡುವ ಮೂಲಕ ಕರಾವಳಿ ಭಾಗದ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಠಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.