ಕನ್ನಡಪ್ರಭ ವಾರ್ತೆ ಉಡುಪಿ
ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ವತಿಯಿಂದ ಉಡುಪಿ ಜಿಲ್ಲೆಯ ಬ್ಯಾಂಕಿನ ಸದಸ್ಯ ಹಾಗೂ ಸದಸ್ಯೇತರ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಲಕ್ಷ ರು. ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ, 2026ನೇ ಸಾಲಿನ ಡೈರಿ ಬಿಡುಗಡೆ ಹಾಗೂ ಉಚ್ಚಿಲ ದಸರಾ ಮಹೋತ್ಸವದ ಚಿತ್ರ ಬಿಡಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಉಡುಪಿಯ ಪುರಭವನದಲ್ಲಿ ಶನಿವಾರ ಮಧ್ಯಾಹ್ನ 3.30ಕ್ಕೆ ಆಯೋಜಿಸಲಾಗಿದೆ. ಬ್ಯಾಂಕಿನ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಮಾರಂಭವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪ್ರತಿಭಾ ಪುರಸ್ಕಾರ ವಿತರಿಸಲಿದ್ದು ಬ್ಯಾಂಕಿನ 2026ನೇ ಸಾಲಿನ ಡೈರಿಯನ್ನು ಗೀತಾನಂದ ಫೌಂಡೇಶನ್ ಕೋಟ ಪ್ರವರ್ತಕ ಆನಂದ ಸಿ. ಕುಂದರ್ ಬಿಡುಗಡೆ ಮಾಡಲಿದ್ದಾರೆ.ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟೀಯ ಮಟ್ಟದ ಜೆಸಿಐ ತರಬೇತುದಾರ ಕೆ. ರಾಜೇಂದ್ರ ಭಟ್ ಅವರು ವಿದ್ಯಾರ್ಥಿಗಳಿಗೆ ಪ್ರೇರಣದಾಯಕ ಮಾತುಗಳನ್ನಾಡಲಿದ್ದಾರೆ. ಅತಿಥಿಗಳಾಗಿ ದ.ಕ .ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಜೆ. ಕರ್ಕೇರ, ಉದ್ಯಮಿ ಆನಂದ ಪಿ. ಸುವರ್ಣ, ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಅಜಯ್ ಪಿ. ಶೆಟ್ಟಿ, ಉಪಸ್ಥಿತರಿರಲಿದ್ದಾರೆ ಎಂದು ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.ನಾಳೆ ಮಹಾಲಕ್ಷ್ಮೀ ಬ್ಯಾಂಕ್ ಪ್ರತಿಭಾ ಪುರಸ್ಕಾರ: ಯಶ್ಪಾಲ್ ಸುವರ್ಣ
ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ವತಿಯಿಂದ ಉಡುಪಿ ಜಿಲ್ಲೆಯ ಬ್ಯಾಂಕಿನ ಸದಸ್ಯ ಹಾಗೂ ಸದಸ್ಯೇತರ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 25 ಲಕ್ಷ ರು. ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ, 2026ನೇ ಸಾಲಿನ ಡೈರಿ ಬಿಡುಗಡೆ ಹಾಗೂ ಉಚ್ಚಿಲ ದಸರಾ ಮಹೋತ್ಸವದ ಚಿತ್ರ ಬಿಡಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಉಡುಪಿಯ ಪುರಭವನದಲ್ಲಿ ಶನಿವಾರ ಮಧ್ಯಾಹ್ನ 3.30ಕ್ಕೆ ಆಯೋಜಿಸಲಾಗಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.