ಮಹಾಲಕ್ಷ್ಮೀ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

| Published : Oct 03 2025, 01:07 AM IST

ಸಾರಾಂಶ

ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಚೇರಿ ಉದ್ಘಾಟನಾ ಸಮಾರಂಭ

ಕನ್ನಡಪ್ರಭ ವಾರ್ತೆ ಮೂಡಲಗಿ

ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಚೇರಿ ಉದ್ಘಾಟನಾ ಸಮಾರಂಭ ಅ.4ರಂದು ಮಧ್ಯಾಹ್ನ 3 ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ನಡೆಯಲಿದೆ ಎಂದು ಸಂಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಇಲ್ಲಿನ ಸಹಕಾರಿ ಸಭಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯು ಕಳೆದ 23 ವರ್ಷಗಳಿಂದ ಸಹಕಾರಿ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಮಾರ್ಚ್‌ 31 ರವರೆಗೆ ಸಂಘವು 15628 ಶೇರುದಾರರನ್ನು ಹೊಂದಿದ್ದು, ₹405.24 ಕೋಟಿ ವ್ಯವಹಾರ ಮಾಡಿ ಪ್ರಗತಿ ಪಥದಲ್ಲಿ ಸಾಗುತ್ತಿದೆ ಎಂದರು. ಕಾಡಸಿದ್ದೇಶ್ವರ ಮಠ ಕನ್ನೇರಿ ಪೂಜ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹಾಗೂ ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ವಿ.ಸೋಮಣ್ಣ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.

ಸಂಸದ ಜಗದೀಶ ಶೆಟ್ಟರ್, ಮಾಜಿ ಸಚಿವರಾದ ಮುರಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಮಾಜಿ ಸಂಸದರಾದ ಪ್ರಭಾಕರ ಕೋರೆ, ರಮೇಶ ಕತ್ತಿ, ಅಮರಸಿಂಹ ಪಾಟೀಲ, ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅಭಯ ಪಾಟೀಲ, ದುರ್ಯೋಧನ ಐಹೊಳೆ, ವಿಠ್ಠಲ ಹಲಗೇಕರ, ನಿಖಿಲ್ ಕತ್ತಿ, ವಿಪ ಸದಸ್ಯ ಹಣಮಂತ ನಿರಾಣಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನೀಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಪಿ.ರಾಜೀವ, ಡಾ.ವಿಶ್ವನಾಥ ಪಾಟೀಲ, ಮಾಜಿ ವಿಪ ಸದಸ್ಯ ಮಹಾಂತೇಶ ಕವಟಗಿಮಠ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಜಿ.ನಂಜನಗೌಡ, ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಪಾಟೀಲ ಅವರು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಜಿಲ್ಲೆಯ ಜನಪ್ರತಿನಿಧಿಗಳು, ಸಹಕಾರಿ ಹಿರಿಯ ಧುರೀಣರು, ಹಲವು ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ತಾಲೂಕಿನ ಸಾರ್ವಜನಿಕರು ಹಾಗೂ ಸಹಕಾರಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಂಸದರು ಕೋರಿದ್ದಾರೆ. ಈ ವೇಳೆ ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸತೀಶ ಕಡಾಡಿ, ಸಹಕಾರಿ ಉಪಾಧ್ಯಕ್ಷ ಶ್ರೀಶೈಲ ತುಪ್ಪದ, ನಿರ್ದೇಶಕರಾದ ಪರಪ್ಪ ಮಳವಾಡ, ಬಾಳಪ್ಪ ಸಂಗಟಿ, ಸಹದೇವ ಹೆಬ್ಬಾಳ, ಶಿವಪ್ಪ ಗೋಸಬಾಳ, ಅಕ್ಕವ್ವ ಹಡಗಿನಾಳ, ಕಾಶವ್ವಾ ಹೆಬ್ಬಾಳ, ಮಲ್ಲಿಕಾರ್ಜುನ ಹುಲೆನ್ನವರ, ನಿಂಗಪ್ಪ ಮಿಡಕನಟ್ಟಿ ಪ್ರಧಾನ ವ್ಯವಸ್ಥಾಪಕ (ಪ್ರಬಾರಿ) ಪರಪ್ಪ ಗಿರೆಣ್ಣವರ ಇದ್ದರು.