ಮಹಾಮಸ್ತಕಾಭಿಷೇಕ: ಭಕ್ತರ ಅನುಕೂಲಕ್ಕಾಗಿ ವೆಬ್‌ಸೈಟ್‌ ಬಿಡುಗಡೆ

| Published : Sep 23 2024, 01:21 AM IST

ಮಹಾಮಸ್ತಕಾಭಿಷೇಕ: ಭಕ್ತರ ಅನುಕೂಲಕ್ಕಾಗಿ ವೆಬ್‌ಸೈಟ್‌ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಪಾರ್ಶ್ವನಾಥ ಭಗವಾನರ ಮಹಾಮಸ್ತಕಾಭಿಷೇಕಕ್ಕೆ ಬರುವವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ವೆಬ್‌ಸೈಟ್ ಸಿದ್ಧಪಡಿಸಿರುವುದಾಗಿ ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಹೇಳಿದರು.

ಹುಬ್ಬಳ್ಳಿ: ತಾಲೂಕಿನ ವರೂರಿನ ದಿಗಂಬರ ಜೈನ ನವಗ್ರಹ ತೀರ್ಥಕ್ಷೇತ್ರದಲ್ಲಿ 2025ರ ಜನವರಿ 15ರಿಂದ 26ರ ವರೆಗೆ ನಡೆಯಲಿರುವ ಪಾರ್ಶ್ವನಾಥ ಭಗವಾನರ ಮಹಾಮಸ್ತಕಾಭಿಷೇಕಕ್ಕೆ ಬರುವವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ವೆಬ್‌ಸೈಟ್ ಸಿದ್ಧಪಡಿಸಿರುವುದಾಗಿ ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಸ್ತಕಾಭಿಷೇಕಕ್ಕೆ ಅಮೆರಿಕ ಸೇರಿದಂತೆ ಹೊರದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಅವರಿಗೆ ಸಕಲ ಸೌಲಭ್ಯ, ವ್ಯವಸ್ಥೆ ಮಾಡಲು ಈಗಾಗಲೇ ಸಿದ್ಧತೆ ನಡೆಸಲಾಗಿದೆ. ಬರುವ ಭಕ್ತರಿಗೆ ಅನಕೂಲವಾಗಲಿ ಎಂಬ ಉದ್ದೇಶದಿಂದ https://mahamasthakabhisheka2025.agmrcet.ac.in ವೆಬ್‌ಸೈಟ್ ಸಿದ್ಧಪಡಿಸಲಾಗಿದ್ದು, ಇದರಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಮಾಡಿರುವ ವ್ಯವಸ್ಥೆಯ ಕುರಿತು ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದರು.

ನೂರಕ್ಕೂ ಅಧಿಕ ಸಮಿತಿ:

ಜನವರಿಯಲ್ಲಿ ನಡೆಯಲಿರುವ ಈ ಮಹಾಮಸ್ತಕಾಭಿಷೇಕ ಅಂತಾರಾಷ್ಟ್ರೀಯ ಕಾರ್ಯಕ್ರಮವಾಗಿದೆ. ಇದರಲ್ಲಿ ಜೈನ ಸಾಹಿತ್ಯ ಸಮ್ಮೇಳನ, ಸಂಗೀತ ಕಾರ್ಯಕ್ರಮ, ಪಂಚ ಕಲ್ಯಾಣ ಪ್ರತಿಷ್ಠಾ ಮಹೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಲಕ್ಷಾಂತರ ಜನ‌ ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಕಲ ವ್ಯವಸ್ಥೆ ಮಾಡಲು ನೂರಕ್ಕೂ ಅಧಿಕ ಸಮಿತಿಗಳನ್ನು ರಚಿಸಲಾಗುತ್ತಿದೆ.

ಎಲ್ಲರೂ ಕೈಜೋಡಿಸಿ

ಈಗಾಗಲೇ ಹಲವು ಪ್ರಮುಖ ಸಮಿತಿಗಳನ್ನು ರಚಿಸಿದ್ದು, ಅವೆಲ್ಲವೂ ಕಾರ್ಯರೂಪದಲ್ಲಿವೆ. ಲೋಕಕಲ್ಯಾಣಕ್ಕಾಗಿ ಹಮ್ಮಿಕೊಳ್ಳಲಾಗುತ್ತಿರುವ ಈ ಮಹಾ ಮಸ್ತಕಾಭಿಷೇಕದ ಯಶಸ್ಸಿಗೆ ನಿತ್ಯವೂ ಅನ್ಯಸಂತರ್ಪಣೆಗೆ ಬೇಕಾದ ದವಸ, ಧಾನ್ಯಗಳನ್ನು ಭಕ್ತರಿಂದ ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಒಟ್ಟಾರೆ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.

ವೆಬಿನಾರ್‌

ಬಾಲಕರು ಹೃದಯಾಘಾತದಿಂದ ಮರಣ ಹೊಂದುತ್ತಿರುವುದು ಆತಂಕಕಾರಿ ಬೆಳವಣಿಗೆ. ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಶೀಘ್ರದಲ್ಲಿಯೇ ನುರಿತ ತಜ್ಞ ವೈದ್ಯರಿಂದ ವೆಬಿನಾರ್ ಮೂಲಕ ಜಾಗೃತಿ ಮೂಡಿಸುವ ಆಲೋಚನೆ ಹಾಕಿಕೊಳ್ಳಲಾಗಿದೆ. ಇನ್ನೊಂದು ವಾರದಲ್ಲಿ ಚರ್ಚಿಸಿ ದಿನಾಂಕ ಘೋಷಿಸುವುದಾಗಿ ಹೇಳಿದರು.