ಸಾರಾಂಶ
ಬಾಗಲಕೋಟೆ: ನಗರದ ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಆವರಣದಲ್ಲಿರುವ ಶಿವಾಲಯದಲ್ಲಿ ಶಿವರಾತ್ರಿ ನಿಮಿತ್ತ ಶುಕ್ರವಾರ ಬೆಳಗ್ಗೆ ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಮಹಾಪೂಜೆ ನೆರವೇರಿಸಿದರು.

ಸಾವಿರಾರು ಭಕ್ತರು ಶಿವಾಲಯಕ್ಕೆ ಆಗಮಿಸಿ ಶಿವನ ದರ್ಶನ ಪಡೆದರು. ಶಿವಾಲಯದಲ್ಲಿ ನಡೆದ ಮಹಾಪೂಜೆಯ ಸಂದರ್ಭ ಬಿ.ವಿ.ವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ), ಬಿ.ವಿ.ವಿ ಸಂಘದ ಗೌರವಾನ್ವಿತ ಸದಸ್ಯರು, ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಅಶೋಕ ಮಲ್ಲಾಪೂರ, ವೈದ್ಯಕೀಯ ಅಧೀಕ್ಷಕಿ ಡಾ.ಭುವನೇಶ್ವರಿ ಯಳಮಲಿ ಮತ್ತು ಎಲ್ಲ ಆರೋಗ್ಯ ಮಹಾವಿದ್ಯಾಲಯಗಳ ಸಿಬ್ಬಂದಿ ಉಪಸ್ಥಿತರಿದ್ದರು.