ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಜೆಎಲ್‌ಬಿ ರಸ್ತೆಯ ಮಹಾರಾಜ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಮುಮ್ಮಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಸೋಮವಾರ ಏರ್ಪಡಿಸಲಾಗಿತ್ತು.ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಬಿ.ಎಸ್. ಶ್ರೀಧರರಾಜೇ ಅರಸ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಆದಿತ್ಯ ಅಧಿಕಾರಿ ಆಸ್ಪತ್ರೆ ಮುಖ್ಯಸ್ಥ ಡಾ.ಚಂದ್ರಶೇಖರ್, ಪ್ರಾಂಶುಪಾಲ ಉದಯಶಂಕರ್ ಪುಷ್ಪಾರ್ಚನೆ ಮಾಡಿದರು. ಹಿರಿಯ ಉಪನ್ಯಾಸಕ ಎ.ಎಲ್. ಉಮೇಶ್ ಹಾಗೂ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಡಾ.ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.
ಪ್ರತಿಭಾ ಪುರಸ್ಕಾರ:ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂಟು, ಒಂಭತ್ತು ಹಾಗೂ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿತ್ತು. ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬಿ.ಎಸ್. ಶ್ರೀಧರರಾಜೇ ಅರಸ್ ಅವರು ಪ್ರತಿಭಾವಂತರಿಗೆ ನಗದು ಬಹುಮಾನ ವಿತರಿಸಿದರು.
ಮಹಾರಾಜ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಸಿ.ಎ.ಶ್ರೀಧರ, ಆದಿತ್ಯ ಅಧಿಕಾರಿ ಆಸ್ಪತ್ರೆಯ. ಮುಖ್ಯಸ್ಥ ಡಾ.ಚಂದ್ರಶೇಖರ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಸಂಘದ ಖಜಾಂಚಿ ರಂಗಸ್ವಾಮಿ ಮುಖ್ಯ ಅತಿಥಿಗಳಾಗಿದ್ದರು. ಉಪ ಪ್ರಾಂಶುಪಾಲ ಡಾ.ಮಹೇಶ್ ಪ್ರಾಸ್ತಾವಿಕ ಭಾಷಣ ಮಾಡಿದರು.ಸಹ ಶಿಕ್ಷಕಿ ಜಯಲಕ್ಷ್ಮಮ್ಮ ಪ್ರಾರ್ಥಿಸಿದರು. ಸಹ ಶಿಕ್ಷಕ ಎನ್.ಎಸ್. ನಾಗಸುಂದರ ಸ್ವಾಗತಿಸಿದರು. ವಿದ್ಯಾರ್ಥಿ ಮುಕುಲ್ ಹಾಗೂ ಸಹ ಶಿಕ್ಷಕಿ ನಾಗರತ್ನಾ ಅವರು ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರನ್ನು ಕುರಿತು ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕುರಿತ ಸಹ ಶಿಕ್ಷಕಿ ಸಿ..ಎಂ. ಸವಿತಾ ಮಾಹಿತಿ ನೀಡಿದರು.
ಸಹ ಶಿಕ್ಷಕಿ ನೇತ್ರಾವತಿ ವಂದಿಸಿದರು. ಸಹ ಶಿಕ್ಷಕ ವಿದ್ವಾನ್ ಲಕ್ಷ್ಮೀನಾರಾಯಣ ಭಟ್ ಕಾರ್ಯಕ್ರಮ ನಿರೂಪಿಸಿದರು.ಕೆಬಿಜಿಗೆ ಶ್ರದ್ಧಾಂಜಲಿಮಹಾರಾಜ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕೋದ್ಯಮ ಕೆ.ಬಿ. ಗಣಪತಿ ಅವರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ಗಣಪತಿ ಅವರ ಪತ್ನಿ ರ್ಯಾಲಿ ಅವರು ಇದೇ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದನ್ನು ಸ್ಮರಿಸಲಾಯಿತು.