2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ತುಳುವರ ಜಾಗತಿಕ ಸಂಘಟನೆ ಮಹಾರಾಷ್ಟ್ರದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಹಿರಿಯ ಸಮಾಜಸೇವಕ, ಯಶಸ್ವಿ ಸಂಘಟಕ, ಉದ್ಯಮಿ ಹರೀಶ್ ಶೆಟ್ಟಿ ಪಡುಬಿದ್ರಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಸಮಾಜಸೇವಕ ಮತ್ತು ಸಂಘಟಕರಾದ ಪ್ರಭಾಕರ್ ಎಸ್. ಹೆಗ್ಡೆ ಹೆಪ್ಪಾಳ ಅವರನ್ನು ನೇಮಕ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ತುಳುವರ ಜಾಗತಿಕ ಸಂಘಟನೆ ಮಹಾರಾಷ್ಟ್ರದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಹಿರಿಯ ಸಮಾಜಸೇವಕ, ಯಶಸ್ವಿ ಸಂಘಟಕ, ಉದ್ಯಮಿ ಹರೀಶ್ ಶೆಟ್ಟಿ ಪಡುಬಿದ್ರಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಸಮಾಜಸೇವಕ ಮತ್ತು ಸಂಘಟಕರಾದ ಪ್ರಭಾಕರ್ ಎಸ್. ಹೆಗ್ಡೆ ಹೆಪ್ಪಾಳ ಅವರನ್ನು ನೇಮಕ ಮಾಡಲಾಗಿದೆ.

ಪಡುಬಿದ್ರಿಯವರಾದ ಹರೀಶ್ ಶೆಟ್ಟಿ ಅವರು ಸಿಂಗರ್ ಇಂಡಿಯಾ ಲಿ. ಸಂಸ್ಥೆಯಲ್ಲಿ ಶಾಖಾ ಪ್ರಬಂಧಕರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ''''''''''''''''ಭಾರತೀಯ ಜೀವ ವಿಮಾ ನಿಗಮದ ಹಿರಿಯ ಸಲಹೆಗಾರರಾಗಿದ್ದಾರೆ. ಕಳೆದ 14 ವರ್ಷಗಳಿಂದ ಎಂಡಿಆರ್‌ಟಿ ಕ್ಲಬ್ ಸದಸ್ಯರಾಗಿರುವ ಅವರು ತುಳುಕೂಟ ಐರೋಲಿ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾಗಿದ್ದು, ಅಧ್ಯಕ್ಷರಾಗಿ ಯಕ್ಷಗಾನ, ನಾಟಕ, ಸಂಗೀತ ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದಾರೆ ‘ವಿದ್ಯಾನಿಧಿ ಕುಂಭ’ ಯೋಜನೆಯ ಮೂಲಕ ಸುಮಾರು 50 ಲಕ್ಷ ರು. ಸಂಗ್ರಹಿಸಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿದ್ದಾರೆ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ, ಐರೋಲಿ ಅಧ್ಯಕ್ಷರಾಗಿ ಸುಮಾರು 55 ಲಕ್ಷ ರು. ವೆಚ್ಚದಲ್ಲಿ ಸಭಾಭವನ ಹಾಗೂ ಶಿಖರದ ನವೀಕರಣ ಕಾರ್ಯವನ್ನು ಪೂರ್ಣಗೊಳಿಸಿದ್ದು, ಬಂಟರ ಸಂಘ ಮುಂಬೈ - ನವಿಮುಂಬೈ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷರಾಗಿ ಎರಡು ವರ್ಷಗಳ ಕಾಲ ಅತ್ಯುತ್ತಮ ಪ್ರಾದೇಶಿಕ ಸಮಿತಿಯ ಪ್ರಶಸ್ತಿ ದೊರಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಪ್ರಸ್ತುತ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಮಂಡಲ್, ಘನ್ಸೆಲಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.ಪ್ರಭಾಕರ್ ಎಸ್. ಹೆಗ್ಡೆ, ಹೆಪ್ಪಾಳ ಅವರು ಶ್ರೀ ಅಯ್ಯಪ್ಪ ಭಕ್ತ ವೃಂದ ಚಾರಿಟೇಬಲ್ ಟ್ರಸ್ಟ್, ನೆರುಲ್‌ನ ಮಾಜಿ ಅಧ್ಯಕ್ಷರು, ರಂಗಭೂಮಿ ಫೈನ್ ಆರ್ಟ್ಸ್, ನವಿ ಮುಂಬೈಯ ಮಾಜಿ ಕಾರ್ಯದರ್ಶಿ, ಶ್ರೀ ಶನೀಶ್ವರ ದೇವಸ್ಥಾನ ಹಾಗೂ ಹೆಗ್ಗಡೆ ಸೇವಾ ಸಂಘ ಮುಂಬೈಯ ಮಾಜಿ ಕಾರ್ಯದರ್ಶಿಯಾಗಿ ಹಲವು ವರ್ಷಗಳಿಂದ ಸಮಾಜಸೇವೆ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರಿಬ್ಬರ ಸಂಘಟನಾ ಅನುಭವ, ಸಮಾಜಸೇವೆ ಹಾಗೂ ತುಳು ಭಾಷೆ, ಸಂಸ್ಕೃತಿ ಮತ್ತು ಸಮುದಾಯದ ಅಭಿವೃದ್ಧಿಯ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ. ಆರ್. ಆಳ್ವ, ಕರ್ನಾಟಕ ರಾಜ್ಯಾಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಹಾಗೂ ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಳಾಡ ಅವರು ಈ ಹುದ್ದೆಗಳಿಗೆ ನೇಮಕಗೊಳಿಸಿದ್ದಾರೆ.2028ರ ಶತಮಾನೋತ್ಸವದ ಅಂಗವಾಗಿ ಮಹಾರಾಷ್ಟ್ರ ರಾಜ್ಯದಲ್ಲಿ ತುಳುವ ಮಹಾಸಭೆಯ ಸಂಘಟನೆಯನ್ನು ಬಲಪಡಿಸುವುದು, ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಚಾರ, ಹೊಸ ಘಟಕಗಳ ರಚನೆ, ಯುವಜನರನ್ನು ಸಂಘಟಿಸುವುದು ಹಾಗೂ ಮಹಾರಾಷ್ಟ್ರದಾದ್ಯಂತ ತುಳುವ ಸಮುದಾಯವನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಈ ನೇಮಕ ಮಹತ್ವದ ಹೆಜ್ಜೆಯಾಗಿದೆ.