ಮಹರ್ಷಿ ವಾಲ್ಮೀಕಿ ವಿಶ್ವಮಾನವ: ಬಸವರಾಜ ಉಳ್ಳಾಗಡ್ಡಿ

| Published : Oct 18 2024, 12:04 AM IST

ಮಹರ್ಷಿ ವಾಲ್ಮೀಕಿ ವಿಶ್ವಮಾನವ: ಬಸವರಾಜ ಉಳ್ಳಾಗಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಮಹರ್ಷ ವಾಲ್ಮೀಕಿ ಕೇವಲ ಒಂದು ಜಾತಿಗೆ ಸಿಮೀತವಾದವರಲ್ಲ. ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಎಲ್ಲ ವರ್ಗದ ಜನರಿಗೂ ವಿಶ್ವಮಾನವರಾಗಿದ್ದಾರೆ.

ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಶ್ರೀ ಮಹರ್ಷ ವಾಲ್ಮೀಕಿ ಕೇವಲ ಒಂದು ಜಾತಿಗೆ ಸಿಮೀತವಾದವರಲ್ಲ. ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಎಲ್ಲ ವರ್ಗದ ಜನರಿಗೂ ವಿಶ್ವಮಾನವರಾಗಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಹೇಳಿದರು.

ಪಟ್ಟಣದ ಬಯಲು ರಂಗ ಮಂದಿರದಲ್ಲಿ ಗುರುವಾರ ತಾಲೂಕಾಡಳಿತ ಹಾಗೂ ವಾಲ್ಮೀಕಿ ಸಮಾಜದ ವತಿಯಿಂದ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.ರಾಮಾಯಣವು ಸ್ತ್ರೀಯರ ಬಗೆಗಿನ ಅನುಕಂಪ, ಶೋಷಿತರ, ಹಿಂದುಳಿದವರ ಬದುಕವನ್ನು ಚಿಂತಿಸುವ ಮಹಾಕಾವ್ಯವಾಗಿದೆ. ಸಮಾಜದ ವಿವಿಧ ಸ್ತರಗಳ ಬದುಕು, ಬವಣೆಗಳ ಬಗ್ಗೆ ಕಾವ್ಯದಲ್ಲಿ ಅನಾವರಣಗೊಳಿಸಲಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ ವಿಜಯಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಇಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಕೇವಲ ಆಚರಿಸಿದರೆ ಸಾಲದು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಗೊಂಡಾಗ ಇಂತಹ ಆಚರಣೆಗೆ ಹೆಚ್ಚು ಮೆರಗು ಬರುತ್ತದೆ ಎಂದರು.

ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ. ವಿಶ್ವ ಮಾನವ ಕಲ್ಪನೆ ಹೊಂದಿದ ಮಹಾನ್ ಪುರುಷರನ್ನು ಎಲ್ಲರೂ ಅನುಕರಿಸುವಂತಾದರೆ ಆಚರಣೆಗಳು ಸಾರ್ಥಕತೆ ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.

ಇತಿಹಾಸ ಉಪನ್ಯಾಸಕ ಹನುಮನಗೌಡ ಪೋಲಿಸ್‌ಪಾಟೀಲ ಉಪನ್ಯಾಸ ನೀಡಿದರು.

ಈ ಸಂದರ್ಭ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದವರನ್ನು ಸನ್ಮಾಸಿದರು.

ತಾಲೂಕಾ ವಾಲ್ಮೀಕಿ ಸಮಾಜದ ಅಧ್ಯಕ್ಷ ಮಾನಪ್ಪ ಪೂಜಾರ ಸಭೆ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ ಪಾಟೀಲ ಬಿರಾದಾರ, ಶಿವಶಂಕರಾವ್ ದೇಸಾಯಿ, ಹಂಚಾಳೆಪ್ಪ ಪೂಜಾರ, ಡಾ. ಶಿವನಗೌಡ ದಾನರಡ್ಡಿ, ಶರಣಪ್ಪ ಪೂಜಾರ ಸೇರಿದಂತೆ ಪಪಂ ಸರ್ವ ಸದಸ್ಯರು ಇದ್ದರು.