ಕುಮಾರಪಟ್ಟಣ: ರಾಣಿಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯ ಪಕ್ಕದ ಬೀರಲೀಗೇಶ್ವರ ದೇವಸ್ಥಾನದ ಪಕ್ಕದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಋರ್ಷಿಗಳ ನೂತನ ದೇವಸ್ಥಾನದ ಉದ್ಘಾಟನೆ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಋರ್ಷಿಗಳ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಧರ್ಮಸಭೆ ಕಾರ್ಯಕ್ರಮವು ಮೇ ೬ರಿಂದ ಮೇ ೮ರ ವರೆಗೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
೮ರಂದು ನಡೆಯುವ ಕಾರ್ಯಕ್ರಮದಲ್ಲಿ ನೂತನ ದೇವಸ್ಥಾನದ ಉದ್ಘಾಟನೆಯನ್ನು ರಾಜ್ಯ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನೆರವೇರಿಸುವರು. ವೇದಿಕೆಯ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ನೆರವೇರಿಸುವರು. ಶಾಸಕ ಪ್ರಕಾಶ್ ಕೋಳಿವಾಡ ಅವರು ಅಧ್ಯಕ್ಷತೆ ವಹಿಸುವರು.ಧರ್ಮಸಭೆಯ ಸಾನಿಧ್ಯವನ್ನುರಾಜನಹಳ್ಳಿ ವಾಲ್ಮೀಕಿಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು, ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠದ ನಿರಂಜನಾನಂದಪುರಿ ಮಹಾಸ್ವಾಮಿಗಳು, ಸಾಣೆಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಪಟ್ಟಾಧ್ಯಕ್ಷರಾದ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಖಂಡೆರಾಯನಹಳ್ಳಿ ಆರೂಢ ತಪೋ ಭೂಮಿಯ ಗುರು ನಾಗರಾಜಾನಂದ ಸ್ವಾಮಿಗಳು, ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಚಾರ್ಯ ಮಹಾಸ್ವಾಮಿಗಳು. ರಾಣಿಬೆನ್ನೂರಿನ ವಿರಕ್ತ ಮಠದ ಗುರು ಬಸವ ಮಹಾಸ್ವಾಮಿಗಳು ವಹಿಸಲಿದ್ದಾರೆ. ವಾಲ್ಮೀಕಿ ಹಾಗೂ ವಿವಿಧ ಸಮಾಜದ ಹಿರಿಯರು, ಮುಖಂಡರು, ವಿವಿಧ ರಾಜಕೀಯ ಪಕ್ಷಗಳ, ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಹಾಗೂ ವಾಲ್ಮೀಕಿ ಸಂಘಗಳ ಮುಖಂಡರು, ಮಹಿಳಾ ಮುಖಂಡರು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ, ಎಪಿಎಂಸಿ, ಟಿಎಪಿಎಂಎಸ್, ವ್ಯವಸಾಯ ಸೇವಾ ಸಂಘಗಳ ಸಮಸ್ತ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಯುವ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಧರ್ಮಸಭೆ ನಂತರ ಎಲ್ಲಾ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಇರುತ್ತದೆ. ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸಿ ಮಹರ್ಷಿ ವಾಲ್ಮೀಕಿ ಮಹರ್ಷಿಗಳ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆ ತಿಳಿಸಿದೆ.ಮೇ ೮ರಂದು ಮಹರ್ಷಿ ವಾಲ್ಮೀಕಿ ದೇವಸ್ಥಾನ ಉದ್ಘಾಟನೆ
ಶಿಗ್ಗಾಂವಿ ತಾಲೂಕಿನ ಚಳಗೇರಿ ಗ್ರಾಮದ ರೈಲ್ವೆ ನಿಲ್ದಾಣ ರಸ್ತೆಯ ಪಕ್ಕದ ಬೀರಲೀಗೇಶ್ವರ ದೇವಸ್ಥಾನದ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಋರ್ಷಿಗಳ ನೂತನ ದೇವಸ್ಥಾನ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.