ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ: ಚಿದಾನಂದ ಗುರುಸ್ವಾಮಿ

| Published : Oct 18 2024, 12:10 AM IST

ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ: ಚಿದಾನಂದ ಗುರುಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಮಹರ್ಷಿ ವಾಲ್ಮೀಕಿ ಅವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ ಮುಂತಾದ ಮಾನವೀಯ ಮೌಲ್ಯಗಳನ್ನು ನೀಡಿ ಮನುಕುಲ ಉದ್ಧಾರಕ್ಕೆ ಶ್ರಮಿಸಿದ್ದಾರೆ ಎಂದು ಇಲ್ಲಿಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದ್ದಾರೆ.

ಹರಪನಹಳ್ಳಿ: ಮಹಾ ಕಾವ್ಯ ರಾಮಾಯಣ ರಚಿಸುವ ಮೂಲಕ ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ ಎಂದು ಇಲ್ಲಿಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದ್ದಾರೆ.

ಅವರು ಪಟ್ಟಣದ ನಟರಾಜ ಕಲಾಭವನದಲ್ಲಿ ತಾಲೂಕು ಆಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಪಂ, ಪುರಸಭೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಅವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ ಮುಂತಾದ ಮಾನವೀಯ ಮೌಲ್ಯಗಳನ್ನು ನೀಡಿ ಮನುಕುಲ ಉದ್ಧಾರಕ್ಕೆ ಶ್ರಮಿಸಿದ್ದಾರೆ ಎಂದು ಹೇಳಿದರು.

ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಅರಸಿಕೇರಿ ವೈ.ಡಿ. ಅಣ್ಣಪ್ಪ ಮಾತನಾಡಿ, ಹರಪನಹಳ್ಳಿ ಪಟ್ಟಣದಲ್ಲಿ ಬಹುತೇಕ ಪೂರ್ಣಗೊಂಡಿರುವ ವಾಲ್ಮೀಕಿ ಭವನವನ್ನು ಶೀಘ್ರ ಉದ್ಘಾಟಿಸಲಾಗುವುದು. ಆ ಸಂದರ್ಭದಲ್ಲಿ ಸಮಾಜದ ವತಿಯಿಂದ ಅದ್ಧೂರಿಯಾಗಿ ವಾಲ್ಮೀಕಿ ಜಯಂತಿ ಆಚರಿಸೋಣ ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಪಿಡಿಒ ಮಾರುತೇಶ ಶ್ರೀರಾಮನ ಆದರ್ಶವನ್ನು ಜಗತ್ತಿಗೆ ತಿಳಿಸಿದವರು. ಮಹರ್ಷಿ ವಾಲ್ಮೀಕಿಯವರು, ನಾವು ಸರ್ವ ಜನಾಂಗದೊಳಗೊಂದಾಗಿ ಬೆಳೆಯಬೇಕು ಎಂದು ತಿಳಿಸಿದರು.

ತಾಪಂ ಇಒ ಚಂದ್ರಶೇಖರ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ಒಂದೇ ಸಮಾಜಕ್ಕೆ ಮೀಸಲಿಡದೆ ಪ್ರಪಂಚವನ್ನು ಗೆದ್ದ ಮಹಾನ್‌ ಮಹರ್ಷಿ ಎಂದು ಹೇಳಿದರು.

ಆಲದಹಳ್ಳಿ ಷಣ್ಮುಖಪ್ಪ, ವಾಲ್ಮೀಕಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ವನಜಾಕ್ಷಿ ಶಿವಯೋಗಿ, ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ ಮಾತನಾಡಿ, ವಾಲ್ಮೀಕಿ ಮಹರ್ಷಿಯವರ ತತ್ವ, ಮೌಲ್ಯಗಳ ಕುರಿತು ತಿಳಿಸಿದರು. ಇದಕ್ಕೂ ಪೂರ್ವದಲ್ಲಿ ಪ್ರವಾಸಿ ಮಂದಿರ ವೃತ್ತದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ತೆರೆದ ವಾಹನದಲ್ಲಿ ನಡೆಸಿದ ಮೆರವಣಿಗೆಗೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಚಾಲನೆ ನೀಡಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ತಹಸೀಲ್ದಾರ್ ಬಿ.ವಿ. ಗಿರೀಶಬಾಬು, ಸಿಪಿಐ ನಾಗರಾಜ ಎಂ. ಕಮ್ಮಾರ, ಪುರಸಭಾ ಸದಸ್ಯ ವೆಂಕಟೇಶ, ಅಂಬೇಡ್ಕರ್ ಸಂಘದ ಅಧ್ಯಕ್ಷ ನಿಚ್ಚವನಹಳ್ಳಿ ಭೀಮಪ್ಪ, ದೇವದಾಸ, ಚಿಕ್ಕೇರಿ ಬಸಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಇಬ್ರಾಹಿಂ ಸಾಬ್, ಬಿಇಒ ಲೇಪಾಕ್ಷಪ್ಪ, ಪ್ರಶಾಂತ ಪಾಟೀಲ್, ಡಾ. ಸುರೇಶ ಉಪಸ್ಥಿತರಿದ್ದರು.