ವಿದ್ಯಾರ್ಥಿಗಳಿಗೆ ಮಹರ್ಷಿ ವಾಲ್ಮೀಕಿ ರಾಮಾಯಣದ ವಿಚಾರಗಳು ಪ್ರಸ್ತುತ: ಮಂತರ್‌ ಗೌಡ

| Published : Oct 29 2023, 01:00 AM IST

ವಿದ್ಯಾರ್ಥಿಗಳಿಗೆ ಮಹರ್ಷಿ ವಾಲ್ಮೀಕಿ ರಾಮಾಯಣದ ವಿಚಾರಗಳು ಪ್ರಸ್ತುತ: ಮಂತರ್‌ ಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಮಹರ್ಷಿ ವಾಲ್ಮೀಕಿ ರಾಮಾಯಣ ಚಿಂತನೆಗಳು ವಿದ್ಯಾರ್ಥಿಗಳಿಗೆ ಪ್ರಸ್ತುತ- ಮಂತರ್ರ್‌ ಗೌಡ
ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ತಾಲೂಕು ಪಂಚಾಯಿತಿ, ಸೋಮವಾರಪೇಟೆ ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಕುಶಾಲನಗರ ಸಮೀಪದ ಮುಳ್ಳುಸೋಗೆಯಲ್ಲಿರುವ ವಾಲ್ಮೀಕಿ ಭವನದಲ್ಲಿ ನಡೆಯಿತು. ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಮಹರ್ಷಿ ವಾಲ್ಮೀಕಿ ರಾಮಾಯಣದ ವಿಚಾರಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ. ಕುಶಾಲನಗರದಲ್ಲಿರುವ ವಾಲ್ಮೀಕಿ ಭವನದ ಬಳಕೆಯ ಬಗ್ಗೆ ಜಿಲ್ಲಾ ವಾಲ್ಮೀಕಿ ನಾಯಕ ಸಮುದಾಯದವರು ಹಾಗೂ ಅಧಿಕಾರಿ ವರ್ಗದವರು ಸಭೆ ಸೇರಿ ಚರ್ಚಿಸಿ ಸಾರ್ವಜನಿಕವಾಗಿ ಸದುಪಯೋಗ ಮಾಡಿಕೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ವೇದಿಕೆಯಲ್ಲಿ ಶಾಸಕರು ಸೂಚನೆ ನೀಡಿದರು. ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜು ಕನ್ನಡ ಭಾಷಾ ಅಧ್ಯಾಪಕ ಮೆ. ನಾ. ವೆಂಕಟನಾಯ್ಕ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಹರ್ಷಿ ವಾಲ್ಮೀಕಿ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಸೋಮವಾರಪೇಟೆ ತಾಲೂಕು ತಹಸೀಲ್ದಾರ್‌ ಎಸ್.ಎನ್. ನರಗುಂದ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್, ಸಂಘಟನೆಯ ಪ್ರಮುಖರಾದ ನಿವಾಣಪ್ಪ, ಸಿದ್ದಪ್ಪ ಮಾತಾಡಿದರು. ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಬಿ.ವಿ.ಜಯಣ್ಣ, ಕುಶಾಲನಗರ ಪುರಸಭೆಯ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಜಿಲ್ಲಾ ವಾಲ್ಮೀಕಿ ಸಂಘದ ಕಾರ್ಯದರ್ಶಿ ವೈ.ಟಿ. ಪರಮೇಶ್, ರಾಜ್ಯ ವಾಲ್ಮೀಕಿ ಯುವ ಘಟಕದ ಅಧ್ಯಕ್ಷ ಚಂದನ್, ಕೂಡುಮಂಗಳೂರು ವೆಂಕಟೇಶ್, ಹೂನ್ನಪ್ಪ, ಜಯಪ್ಪ ಹಾನಗಲ್, ಶಿವಸಿದ್ದಪ್ಪ, ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ ಸೇರಿದಂತೆ ವಿವಿಧ ಸಮಾಜದ ಮುಖಂಡರು ಮತ್ತು ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.