ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ನಗರ
ಸಮಸ್ತ ಹಿಂದೂಗಳ ಆರಾಧ್ಯ ದೈವವಾಗಿರುವ ಮರ್ಯಾದ ಪುರುಷ ಶ್ರೀರಾಮ ದೇವರನ್ನುಜಗತ್ತಿಗೆ ಪರಿಚಯಿಸಿದ ಮಹರ್ಷಿ ವಾಲ್ಮೀಕಿ ಅವರು ಸರ್ವತ್ರ ಪೂಜ್ಯನೀಯರು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.ತಾಲೂಕು ಆಡಳಿತ, ತಾಪಂ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕು ನಾಯಕರ ಸಂಘದ ವತಿಯಿಂದ ಗುರುವಾರ ಪಟ್ಟಣದ ಪುರಸಭೆ ಬಯಲು ರಂಗ ಮಂದಿರದ ಆವರಣದಲ್ಲಿ ನಡೆದ ವಾಲ್ಮೀಕಿಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾನವರಾಗಿ ಜನಿಸಿ ದೈವತ್ವಕ್ಕೇರಿದ ಅವರ ಜೀವನದ ತತ್ವ ಮತ್ತು ಸಿದ್ಧಾಂತಗಳು ನಮಗೆ ಆದರ್ಶಪ್ರಾಯವಾಗಿದ್ದು ಎಲ್ಲರೂ ಅವುಗಳನ್ನು ಪಾಲಿಸಿ ಸುಂದರ ಜೀವನ ಮಾಡಬೇಕು ಎಂದರು.ಸಾಲಿಗ್ರಾಮ ತಾಲೂಕು ಕೇಂದ್ರದಲ್ಲಿ ನಾಯಕರ ಸಮುದಾಯ ಭವನ ನಿರ್ಮಾಣ ಮಾಡಲು ನಿವೇಶನ ಕೊಡಿಸಿ ಸರ್ಕಾರದಿಂದ ಒಂದು ಕೋಟಿ ಅನುದಾನ ಮಂಜೂರು ಮಾಡಿಸಿ ಸುಂದರ ಭವನ ನಿರ್ಮಾಣ ಮಾಡಿಸಿಕೊಡುವ ಭರವಸೆ ನೀಡಿದರು.
ಇದರ ಜತೆಗೆ ಕೆ.ಆರ್.ನಗರ ಪಟ್ಟಣದ ಕೃಷ್ಣರಾಜೇಂದ್ರ ಕ್ರೀಡಾಂಗಣದ ಬಳಿ ಇರುವ ವಾಲ್ಮೀಕಿ ನಾಯಕರ ಸಮುದಾಯ ಭವನದ ಆವರಣದಲ್ಲಿ ದೇವಾಲಯ ನಿರ್ಮಾಣ ಮಾಡಲು 5 ಲಕ್ಷ ಅನುದಾನ ನೀಡುವುದಾಗಿ ಪ್ರಕಟಿಸಿದರು.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಸಂದೇಶ್, ಪುರಸಭೆ ಸದಸ್ಯರಾದ ನಟರಾಜು, ಶಂಕರಸ್ವಾಮಿ, ಶಂಕರ್ ಅವರಿಗೆ ವಾಲ್ಮೀಕಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತಲ್ಲದೆ, ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಜತೆಗೆ ತಾಲೂಕು ನಾಯಕರ ಸಂಘದ ವತಿಯಿಂದ ಶಾಸಕ ಡಿ. ರವಿಶಂಕರ್ ಮತ್ತು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರನ್ನು ಸನ್ಮಾನಿಸಲಾಯಿತು.
ಮೈಸೂರು ಮಂಡಿಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕಶಾಲೆಯ ಪದವೀಧರ ಶಿಕ್ಷಕ ಅಭಿಲಾಷನಾಯಕ ಉಪನ್ಯಾಸ ನೀಡಿದರು.ಕಾರ್ಯಕ್ರಮ ಆರಂಭಕ್ಕೂ ಮೊದಲು ಪಟ್ಟಣದ ಕೃಷ್ಣರಾಜೇಂದ್ರ ಪದವಿ ಪೂರ್ವ ಕಾಲೇಜು ಆವರಣದಿಂದ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಯನ್ನು ಪ್ರಮುಖ ರಸ್ತೆಗಳಲ್ಲಿ ವಿವಿದ ಕಲಾ ತಂಡಗಳ ಜತೆಗೆ ಅದ್ದೂರಿಯಾಗಿ ಮೆರವಣಿಗೆಯ ಮೂಲಕ ವೇದಿಕೆಯವರೆಗೆ ಕರೆತರಲಾಯಿತು.
ಜಿಪಂ ಮಾಜಿ ಸದಸ್ಯ ಜಿ.ಆರ್. ರಾಮೇಗೌಡ, ಪುರಸಭಾ ಸದಸ್ಯರಾದ ಶಿವುನಾಯಕ್, ಸಿ. ಶಂಕರ್, ನಟರಾಜು, ಪ್ರಕಾಶ್, ಕೆ.ಎಸ್. ಶಂಕರ್ ಸ್ವಾಮಿ, ಮಾಜಿ ಸದಸ್ಯ ಕೆ. ವಿನಯ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್. ಮಹೇಶ್, ತಾಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ನರಸಿಂಹನಾಯಕ, ಸಾಲಿಗ್ರಾಮ ತಾಲೂಕು ನಾಯಕ ಸಂಘದ ಅಧ್ಯಕ್ಷ ಸಿ.ಸಿ. ಮಹದೇವ್, ತಹಸೀಲ್ದಾರ್ ಗಳಾದ ಜಿ. ಸುರೇಂದ್ರ ಮೂರ್ತಿ, ಸೋಮನಗೌಡ ಎನ್. ನರಗುಂದ್, ಪುರಸಭಾ ಮುಖ್ಯಾಧಿಕಾರಿ ಬಿ.ವಿ. ವೆಂಕಟೇಶ್, ಬಿಇಒ ಆರ್. ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಎಲ್. ಶಂಕರಮೂರ್ತಿ, ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಎಸ್.ಮಹದೇವ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಸಂದೇಶ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ಎಚ್.ಎಚ್. ನಾಗೇಂದ್ರ, ತಾಲೂಕು ಬಿಜೆಪಿ ಅಧ್ಯಕ್ಷ ಸಾ.ರಾ. ತಿಲಕ್, ನಾಯಕ ಸಮಾಜದ ಮುಖಂಡರಾದ ದೇವರಾಜು, ನಾಗರಾಜನಾಯಕ, ಎ.ಆರ್. ಶಿವಣ್ಣ, ಸುಬ್ಬುಕೃಷ್ಣ, ಶ್ರೀನಿವಾಸ್, ತಾಲೂಕು ಕಾಂಗ್ರೆಸ್ ವಕ್ತಾರ ಸೈಯದ್ ಜಾಬೀರ್, ಹಿರಿಯ ಆರೋಗ್ಯ ನಿರೀಕ್ಷಕ ಕೆ.ವಿ.ರಮೇಶ್, ಶಿಕ್ಷಣ ಸಂಯೋಜಕ ದಾಸಪ್ಪ, ವೀರಶೈವ ಮುಖಂಡ ವೃಷಬೇಂದ್ರ ಇದ್ದರು.ಮಹರ್ಷಿ ವಾಲ್ಮೀಕಿ ಅವರ ಹೆಸರು ಸೂರ್ಯ ಮತ್ತು ಚಂದ್ರರು ಇರುವವರೆಗೆ ಶಾಶ್ವತ: ಎಚ್.ವಿಶ್ವನಾಥ್‌ಕೆ.ಆರ್.ನಗರ:
ಶ್ರೇಷ್ಠ ಗ್ರಂಥವಾಗಿರುವ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಹೆಸರು ಸೂರ್ಯ ಮತ್ತು ಚಂದ್ರರು ಇರುವವರೆಗೆ ಶಾಶ್ವತ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.ತಾಲೂಕು ಆಡಳಿತ, ತಾಪಂ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕು ನಾಯಕರ ಸಂಘದ ವತಿಯಿಂದ ಗುರುವಾರ ಪಟ್ಟಣದ ಪುರಸಭೆ ಬಯಲು ರಂಗ ಮಂದಿರದ ಆವರಣದಲ್ಲಿ ನಡೆದ ವಾಲ್ಮೀಕಿಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಾಕ್ಷಾತ್ ರಾಮನಿಂದ ಪ್ರೇರಣೆಯಾಗಿ ಮಹಾಕಾವ್ಯ ರಚಿಸಿದ ಅವರು ಯುಗಯೋಗಿ ಎಂದರು.ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಜಿ.ಎಲ್. ಹಾವನೂರ ಅಯೋಗ ರಚಿಸಿ ಆ ಮೂಲಕ ಹಿಂದುಳಿದ ವರ್ಗದವರಿಗೆ ಎಲ್ಲ ಕ್ಷೇತ್ರಗಳಲ್ಲೂ ಅವಕಾಶ ನೀಡಿ ಆರ್ಥಿಕವಾಗಿ ದುರ್ಬಲರಾಗಿದ್ದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಆರಂಭಿಸಿ ಆ ಮೂಲಕ ಅವರ ಶೈಕ್ಷಣಿಕ ಬದುಕಿಗೆ ಆಸರೆಯಾಗಿದ್ದರೆಂದು ತಿಳಿಸಿದರು.1991 ರಲ್ಲಿ ಲೋಕಸಭಾ ಸದಸ್ಯರಾಗಿ ಅಯ್ಕೆಯಾದ ಮಾಜಿ ಪ್ರಧಾನ ಮಂತ್ರಿಗಳಾದ ಎಚ್.ಡಿ. ದೇವೇಗೌಡರು ಅಂದಿನ ಪ್ರಧಾನ ಮಂತ್ರಿ ಚಂದ್ರಶೇಖರ್ ಅವರಿಗೆ ಶಿಫಾರಸ್ಸು ಮಾಡಿ ನಾಯಕ ಸಮಾಜವನ್ನು ಎಸ್ಟಿ ವರ್ಗಕ್ಕೆ ಸೇರಿಸಿದ್ದು ಇದನ್ನು ಎಲ್ಲರೂ ನೆನೆಯಬೇಕು ಎಂದು ನುಡಿದರು.
ಎಚ್.ಡಿ. ದೇವೇಗೌಡರು ನಾಯಕ ಸಮಾಜದ ಬಾಂಧವರಿಗೆ ಮಾಡಿದ ಉಪಕಾರವನ್ನು ನೆನೆದು ಅವರಿಗೆ ಕೃತಜ್ಞತೆ ಸಲ್ಲಿಸಬೇಕೆಂದರಲ್ಲದೆ, ಉಪಕಾರ ಸ್ಮರಣೆ ನಮ್ಮ ಕರ್ತವ್ಯ ಎಂದು ಅವರು ಅಭಿಪ್ರಾಯಪಟ್ಟರು.