ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ೮೮ ನೇ ತ್ರಿಮೂರ್ತಿ ಶಿವ ಜಯಂತಿ ಅಂಗವಾಗಿ ೨೧ ಅಡಿ ಎತ್ತರದ ರುದ್ರಾಕ್ಷಿ ಶಿವಲಿಂಗ ಪುಣ್ಯದರ್ಶನದ ಉದ್ಘಾಟನಾ ಕಾರ್ಯಕ್ರಮ ಮಾ.೭ರಂದು ನಡೆಯಲಿದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಶಾರದಾ ತಿಳಿಸಿದರು.
ಅಂದು ಬೆಳಗ್ಗೆ ೧೧ ಗಂಟೆಗೆ ಕಲಾ ಮಂದಿರದ ಹಿಂಭಾಗ ಇರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಮೈಸೂರು ಉಪವಲಯ ಬ್ರಹ್ಮಕುಮಾರೀಸ್ ನಿರ್ದೇಶಕಿ ರಾಜಯೋಗಿನಿ ಬಿ.ಕೆ.ಲಕ್ಷ್ಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಸಮಾರಂಭವನ್ನು ಜಿಲ್ಲಾಕಾರಿ ಡಾ.ಕುಮಾರ ಉದ್ಘಾಟಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ವಿಶೇಷ ಅತಿಥಿಯಾಗಿ ಭಾಗವಹಿಸುವರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕಾವೇರಿಯ ಆಪ್ತ ಸಹಾಯಕ ತ್ರಿಭುವನ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಂಭುಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ, ಶ್ರೀಕ್ಷೇತ್ರ ಧರ್ಮಸ್ಥಳ ಜಿಲ್ಲಾ ನಿರ್ದೇಶಕಿ ಎಂ.ಚೇತನಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.
ಮಾ.೭ರಿಂದ ೧೨ ರವರೆಗೆ ಬೆಳಗ್ಗೆ ೭ ರಿಂದ ರಾತ್ರಿ ೯ ಗಂಟೆಯವರೆಗೆ ಸಹಸ್ರ ಶಿವಲಿಂಗ, ರುದ್ರಾಕ್ಷಿ ಶಿವಲಿಂಗ, ೩-ಡಿ ಹೋಲೋಗ್ರಾಂ ಶಿವಲಿಂಗ ಹಾಗೂ ಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದರು.ಇದೇ ವೇಳೆ ಪ್ರದರ್ಶನದ ಪ್ರಚಾರ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದರಲ್ಲದೇ, ಸಮಸ್ತ ನಾಗರಿಕರು ಆಗಮಿಸಿ ಶಿವಲಿಂಗ ದರ್ಶನ ಮಾಡಬೇಕೆಂದು ಮನವಿ ಮಾಡಿದರು. ವಿಶ್ವವಿದ್ಯಾಲಯದ ಶ್ವೇತಾ ಗೋಷ್ಠಿಯಲ್ಲಿದ್ದರು.