ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರುಮಲೆಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಜಾತ್ರೆ ಮಂಗಳವಾರದಿಂದ ಪ್ರಾರಂಭವಾಗಲಿದೆ.
ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮಂಗಳವಾರದಿಂದ 5 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿರುವುದರಿಂದ ಸಕಲ ಸಿದ್ಧತೆಗಳು ಭಕ್ತರ ಅನುಕೂಲಕ್ಕಾಗಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದೆ.ದೇವಾಲಯಕ್ಕೆ ವಿಶೇಷ ವಿದ್ಯುತ್ ದೀಪ ಅಲಂಕಾರ ಹಾಗೂ ವಿವಿಧ ಹೂಗಳಿಂದ ಸಿಂಗರಿಸಲಾಗಿದ್ದು ತಳಿರು ತೋರಣಗಳಿಂದ ಸಿಂಗರಿಸಿ ದೇವಾಲಯವನ್ನು ಅಲಂಕಾರಗೊಳಿಸಲಾಗಿದೆ.
ಮೂಲಭೂತ ಸೌಲಭ್ಯಗಳ ಸಿದ್ಧತೆ :ಮಲೆ ಮಾದೇಶ್ವರ ಬೆಟ್ಟಕ್ಕೆ ರಾಜ್ಯದ ನಾನಾ ಭಾಗಗಳಿಂದ ಪಾದಯಾತ್ರೆ ಮೂಲಕ ಹಾಗೂ ವಿವಿಧ ವಾಹನಗಳಲ್ಲಿ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆಯಿಂದ ಈ ಕ್ಷೇತ್ರದಲ್ಲಿ ಭಕ್ತಾದಿಗಳಿಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ ಹಾಗೂ ಬರಬಿಸಿಲನ್ನು ತಪ್ಪಿಸಲು ಭಕ್ತಾದಿಗಳಿಗಾಗಿ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಲಾಡು ದಾಸ್ತಾನು:ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆಯಿಂದ ಕಳೆದ 3 ದಿನಗಳಿಂದ ಭಕ್ತಾದಿಗಳು ಪಾದಯಾತ್ರೆಯಲ್ಲಿ ಬರುತ್ತಿರುವುದರಿಂದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಭಕ್ತರಿಗಾಗಿ 6,00,000 ಲಾಡು ದಾಸ್ತಾನು ಮಾಡಲಾಗಿತ್ತು. ಈಗಾಗಲೇ ಕಳೆದ 3 ದಿನಗಳಿಂದ 1.50 ಲಕ್ಷ ಲಾಡು ಮಾರಾಟವಾಗಿದೆ. ದಿನನಿತ್ಯ 50 ಬಾಣಸಿಗರು 70,000ದಂತೆ ಲಾಡು ತಯಾರು ಮಾಡಿ ದಾಸ್ತಾನು ಕೇಂದ್ರದಲ್ಲಿ ಭಕ್ತರಿಗಾಗಿ ವ್ಯವಸ್ಥೆ ಕಲ್ಪಿಸಲಾಗಿದೆ.
ಬಿಗಿ ಪಹರೆ:ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಮಹಾಶಿವರಾತ್ರಿ ಹಬ್ಬಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮಲೆಮಾದೇಶ್ವರ ಬೆಟ್ಟದಲ್ಲಿ ಆಯಾ ಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸುವ ಮೂಲಕ ದೇವಾಲಯದ ಬಳಿ ಬಸ್ ನಿಲ್ದಾಣ ಹಾಗೂ ಸಾಲೂರು ಮಠಕ್ಕೆ ತೆರಳುವ ರಸ್ತೆ ಮತ್ತು ತಾಳು ಬೆಟ್ಟದಲ್ಲೂ ಪೊಲೀಸರನ್ನು ಸೂಕ್ತ ಬಂದೋಬಸ್ತಾಗಿ ನಿಯೋಜನೆಗೊಳಿಸಲಾಗಿದೆ.ತಪಾಸಣೆ ವೇಳೆ ಮದ್ಯ ವಶ:
ತಾಳು ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿಸಲು ಕಟ್ಟುನಿಟ್ಟಿನ ಕ್ರಮದೊಂದಿಗೆ ವಾಹನಗಳನ್ನು ತಪಾಸಣೆ ನಡೆಸಿದಾಗ ಅಪಾರ ಸಂಖ್ಯೆಯ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳ ಜೊತೆ ವಿವಿಧ ಕಂಪನಿಯ ಮದ್ಯದ ಬಾಟಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.ಮಹಾಶಿವರಾತ್ರಿ ಹಬ್ಬಕ್ಕೆ ಸಕಲ ಸಿದ್ಧತೆಗಳು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ನಿರಂತರ ದಾಸೋಹ ವ್ಯವಸ್ಥೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಭಕ್ತರಿಗಾಗಿ ಕಲ್ಪಿಸಲಾಗಿದೆ. ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಶಿವರಾತ್ರಿ ಜಾಗರಣೆಗೂ ವ್ಯವಸ್ಥೆಯನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ಲಾಸ್ಟಿಕ್ ಮುಕ್ತ ಕ್ಷೇತ್ರಕ್ಕೆ ಭಕ್ತರು ಸಹಕಾರ ನೀಡಬೇಕು.ಎ.ಇ ರಘು, ಕಾರ್ಯದರ್ಶಿ, ಮಲೆಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ.
ಜಾತ್ರೆಗೆ ವಾಹನಗಳ ನಿಷೇಧ: ಜಿಲ್ಲಾಧಿಕಾರಿಮಹಾಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಜಾತ್ರೆಗಾಗಿ ಫೆ.25 ರ ಬೆಳಿಗ್ಗೆ 6 ಗಂಟೆಯಿಂದ ಮಾ.1ರ ಸಂಜೆ 7 ಗಂಟೆಯವರೆಗೆ ದ್ವಿಚಕ್ರ ವಾಹನ, ತ್ರಿಚಕ್ರ ವಾಹನಗಳು (ಗೂಡ್ಸ್, ಆಟೊ ರಿಕ್ಷಾಗಳು ಸೇರಿದಂತೆ) ತೆರಳುವುದನ್ನು ತಾತ್ಕಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.ಶಿವರಾತ್ರಿ ಜಾತ್ರೆ ಹಿನ್ನಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಜಿಲ್ಲೆ, ಹೊರ ಜಿಲ್ಲೆ, ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗಲಿದೆ. ಸದರಿ ರಸ್ತೆಯು ಅರಣ್ಮ ಪ್ರದೇಶ ಹಾಗೂ ಕಡಿದಾದ ತಿರುವುಗಳಿಂದ ಕೂಡಿದ್ದು ವಾಹನ ಸಂಚಾರದಲ್ಲಿ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವ ಕಾರಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.