ಮಹಾಶಿವರಾತ್ರಿ: ಮದ್ದೂರು ತಾಲೂಕಿನ ವಿವಿಧ ದೇಗುಲಗಳಲ್ಲಿ ಪೂಜಾ ಕೈಂಕರ್ಯ

| Published : Feb 27 2025, 12:30 AM IST

ಮಹಾಶಿವರಾತ್ರಿ: ಮದ್ದೂರು ತಾಲೂಕಿನ ವಿವಿಧ ದೇಗುಲಗಳಲ್ಲಿ ಪೂಜಾ ಕೈಂಕರ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಮದ್ದೂರು ತಾಲೂಕಿನ ವೈದ್ಯನಾಥಪುರದ ಪುರಾಣ ಪ್ರಸಿದ್ಧ ಶ್ರೀವೈದ್ಯನಾಥೇಶ್ವರ ದೇವಾಲಯದಲ್ಲಿ ಮುಂಜಾನೆ ಕ್ಷೀರ ಅಭಿಷೇಕ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕದೊಂದಿಗೆ ಪುಷ್ಪಾಲಂಕಾರ ಸೇವೆ ನಂತರ ಮಹಾಮಂಗಳಾರತಿ ರೊಂದಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮದ್ದೂರು

ಮಹಾಶಿವರಾತ್ರಿ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಭಕ್ತ ಸಮೂಹ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಾ ಪಡೆದು ಧನ್ಯತಾ ಭಾವ ಮೆರೆದರು.

ತಾಲೂಕಿನ ವೈದ್ಯನಾಥಪುರದ ಪುರಾಣ ಪ್ರಸಿದ್ಧ ಶ್ರೀವೈದ್ಯನಾಥೇಶ್ವರ ದೇವಾಲಯದಲ್ಲಿ ಮುಂಜಾನೆ ಕ್ಷೀರ ಅಭಿಷೇಕ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕದೊಂದಿಗೆ ಪುಷ್ಪಾಲಂಕಾರ ಸೇವೆ ನಂತರ ಮಹಾಮಂಗಳಾರತಿ ರೊಂದಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಗ್ರಾಮದ ಶ್ರೀಪ್ರಸನ್ನ ಪಾರ್ವತಂಬ ವೈದ್ಯನಾಥೇಶ್ವರ ಟ್ರಸ್ಟ್ ವತಿಯಿಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ, ಲಘು ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿಯ ಶ್ರೀಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ಸಂಜೆ ದ್ವಿತೀಯ ಯಾಮ ಪೂಜೆ, ರುದ್ರಾಭಿಷೇಕ. ಪುಷ್ಪಾಲಂಕರ ಸೇವೆಯೊಂದಿಗೆ ದೊಂದಿಗೆ ವಿಶೇಷ ಪೂಜಾ ಕಾರ್ಯಗಳು ಜರುಗಿದವು.

ಮಳವಳ್ಳಿ ರಸ್ತೆಯ ಶ್ರೀವಿಶ್ವನಾಥ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಹೋಮ ಹವನಾದಿಗಳು ಜರುಗಿದವು. ಸಂಜೆ ರುದ್ರಾಭಿಷೇಕ, ಅಲಂಕಾರ ಸೇವೆಯೊಂದಿಗೆ ವಿಶೇಷ ಪೂಜಾ ಕಾರ್ಯಗಳು ಜರುಗಿದವು.

ತಾಲೂಕಿನ ಆತಗೂರು ಹೋಬಳಿಯ ಚಿಕ್ಕ ಅಂಕನಹಳ್ಳಿಯ ಶ್ರೀನಂದಿ ಬಸವೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಸೋಮನಹಳ್ಳಿಯ ಶ್ರೀ ಮಹದೇಶ್ವರ ದೇವಾಲಯ ಸೇರಿದಂತೆ ತಾಲೂಕಿನ ವಿವಿಧ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆಯೊಂದಿಗೆ ಶಿವರಾತ್ರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಭಕ್ತಾದಿಗಳು ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ದರ್ಶನಾ ಪಡೆದು ಧನ್ಯತಾ ಭಾವ ಮೆರೆದರು.

ಬ್ರಾಹ್ಮಣ ಯುವ ಸೇವಾ ಟ್ರಸ್ಟ್‌ನಿಂದ ಈಶ್ವರನಿಗೆ ಪಂಚಾಮೃತ ಅಭಿಷೇಕ

ಮಂಡ್ಯ:

ಬ್ರಾಹ್ಮಣ ಯುವ ಸೇವಾ ಟ್ರಸ್ಟ್‌ನಿಂದ ನಗರದ ಹಾಲಹಳ್ಳಿ ಬಡಾವಣೆಯಲ್ಲಿರುವ ಬ್ರಾಹ್ಮಣರ ರುದ್ರ ಭೂಮಿ (ಮೋಕ್ಷದಾಮ)ದಲ್ಲಿರುವ ಈಶ್ವರನಿಗೆ ಬುಧವಾರ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಪುಷ್ಪಾಲಂಕಾರ ನಂತರ ಮಹಾಮಂಗಳಾರತಿಯನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ವೇದ ಬ್ರಹ್ಮಶ್ರೀ ಅನಂತನಾರಾಯಣ ಶಾಸ್ತ್ರಿ ಮತ್ತು ಶಿಷ್ಯ ವೃಂದದಿಂದ ರುದ್ರ ಪಾರಾಯಣ, ಮತ್ತು ಪೂಜಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಬ್ರಾಹ್ಮಣ ಸಭಾ ಅಧ್ಯಕ್ಷ ನರಸಿಂಹಮೂರ್ತಿ, ಕಾರ್ಯದರ್ಶಿ ಶಣೈ, ನಿರ್ದೇಶಕರಾದ ಪ್ರಸನ್ನ ಮಯ್ಯ, ಉಮಾ ದೊರೆಸ್ವಾಮಿ, ಹೂಳಲು ರಾಘವೇಂದ್ರ ಭಾಗವಹಿಸಿದ್ದರು.

ವಿಪ್ರ ಪ್ರಮುಖರಾದ ಶಶಿ ಟ್ರೇಡರ್ಸ್ ರಾಮಕೃಷ್ಣ, ಗುಂಡೂರಾವ್, ನಾರಾಯಣ್, ಸುರೇಶ್, ಬ್ರಾಹ್ಮಣ ಯುವ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ರಮೇಶ್, ಸಂಘದ ಅಧ್ಯಕ್ಷ ರಾಧಾಕೃಷ್ಣನ್, ಉಪಾಧ್ಯಕ್ಷ ವಿಶ್ವನಾಥ್, ಕಾರ್ಯದರ್ಶಿ ಬಾಲಾಜಿ ಕೆ.ಆರ್., ಖಜಾಂಚಿ ರಾಮಚಂದ್ರ, ನಿರ್ದೇಶಕರಾದ ಎನ್.ಗೋಪಿನಾಥ್, ರವಿಶಂಕರ್, ಕೇಶವ, ಪ್ರದೀಪ್ ಕುಮಾರ್ ಅನೇಕ ವಿಪ್ರ ಬಾಂಧವರು ಭಾಗವಹಿಸಿದ್ದರು.