ಶ್ರೀ ಪಾತಾಳೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಪೂಜಾ ಕೈಂಕರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಪೈಂಟ್ ರವಿ ಮಾತನಾಡಿ, ಈ ಬಾರಿ ಕೆಂಪೇಗೌಡ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಲು ಸಾಧ್ಯವಾಗಲಿಲ್ಲ. ಎಂದಿನಂತೆ ವಿಶೇಷವಾಗಿ ಪೂಜಾ ಕಾರ್ಯಗಳನ್ನು ನೆರವೇರಿಸಿ ಬಂದಂತ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಗುತ್ತಿದೆ. ಹಬ್ಬದ ಬೆಳಗ್ಗೆ ಪಾತಾಳೇಶ್ವರನಿಗೆ ಗಂಗಾಭಿಷೇಕ, ಪಂಚಾಮೃತ ಅಭಿಷೇಕ, ಬಿಲ್ವಾರ್ಚನೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಮಹಾ ಮಂಗಳಾರತಿ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ಬೇಲೂರುಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಪಾತಾಳೇಶ್ವರ ದೇವಾಲಯದಲ್ಲಿ ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಪಟ್ಟಣದ ಕೆಂಪೇಗೌಡ ರಸ್ತೆಯಲ್ಲಿರುವ ಶ್ರೀ ಪಾತಾಳೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಪೂಜಾ ಕೈಂಕರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಪೈಂಟ್ ರವಿ ಮಾತನಾಡಿ, ಈ ಬಾರಿ ಕೆಂಪೇಗೌಡ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಲು ಸಾಧ್ಯವಾಗಲಿಲ್ಲ. ಎಂದಿನಂತೆ ವಿಶೇಷವಾಗಿ ಪೂಜಾ ಕಾರ್ಯಗಳನ್ನು ನೆರವೇರಿಸಿ ಬಂದಂತ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಗುತ್ತಿದೆ. ಹಬ್ಬದ ಬೆಳಗ್ಗೆ ಪಾತಾಳೇಶ್ವರನಿಗೆ ಗಂಗಾಭಿಷೇಕ, ಪಂಚಾಮೃತ ಅಭಿಷೇಕ, ಬಿಲ್ವಾರ್ಚನೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಮಹಾ ಮಂಗಳಾರತಿ ನೆರವೇರಿಸಲಾಯಿತು. ಸಂಜೆ ವೇಳೆ 5 ಗಂಟೆಯಿಂದಲೇ ವಿಶೇಷ ಪೂಜೆ ಆರಂಭಗೊಂಡು ಬಂದಂತ ಭಕ್ತಾದಿಗಳಿಂದ ಶಿವನ ಮೂರ್ತಿಗೆ ಗಂಗಾಜಲ ಹಾಕುವ ಅವಕಾಶ ಕಲ್ಪಿಸಲಾಗಿತ್ತು. ನಾಡಿನ ಸಮಸ್ತ ಜನರಿಗೂ ಪಾತಾಳೇಶ್ವರನ ಆಶೀರ್ವಾದ ಲಭಿಸಲಿ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಶ್ರೀ ಅವರ ಕೃಪೆಗೆ ಪಾತ್ರರಾಗುವ ಮೂಲಕ ತಮ್ಮ ಕೈಯಲ್ಲಾದಷ್ಟು ತನು, ಮನ, ಧನ ಸಹಕಾರ ನೀಡಿದ್ದು ಮುಂದಿನ ದಿನಗಳಲ್ಲಿ ಅದ್ಧೂರಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದರು.ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಬಿಸಿ ಜಗದೀಶ್ ಮಾತನಾಡಿ, ನಮ್ಮ ರಸ್ತೆಯಲ್ಲಿ ಪಾತಾಳೇಶ್ವರ ದೇವಸ್ಥಾನ ಇರುವುದು ನಮ್ಮೆಲ್ಲರ ಭಾಗ್ಯ. ಪಟ್ಟಣದ 23 ವಾರ್ಡುಗಳಿಂದಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನ ಆಶೀರ್ವಾದ ಪಡೆಯುತ್ತಾರೆ. ಪಾತಾಳೇಶ್ವರನ ವಿಶೇಷವೇನೆಂದರೆ ಭಕ್ತರು ಬಂದು ಬೇಡಿದಂತ ಕೆಲಸ ಸುಗಮವಾಗಿ ಆಗುತ್ತದೆ. ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿವನ ಆಶೀರ್ವಾದ ಪಡೆಯಬೇಕು ಹಾಗೂ ನಾಡಿನಾದ್ಯಂತ ಉತ್ತಮ ಮಳೆ ಬೆಳೆ ಆಗುವ ಮೂಲಕ ರೈತನ ಬದುಕು ಹಸನಾಗಲಿ ಎಂದರು.ಇದೇ ಸಂದರ್ಭ ಬಂದಂತ ಭಕ್ತಾದಿಗಳಿಗೆ ಬೆಳಗಿನ ಪ್ರಸಾದವಾಗಿ ಉಪ್ಪಿಟ್ಟು, ಕೇಸರಿಬಾತ್ ಮತ್ತು ಪಂಚಾಮೃತ ನೀಡಿದರೆ ಸಂಜೆ ವೇಳೆಗೆ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು.ಈ ಸಂದರ್ಭ ಅರ್ಚಕರಾದ ವೇದಬ್ರಹ್ಮ ಮಂಜುನಾಥ್, ಶ್ರೀ ಪಾತಾಳೇಶ್ವರ ಸೇವಾ ಟ್ರಸ್ಟಿನ ಉಪಾಧ್ಯಕ್ಷರಾದ ಎಸ್ ಟಿ.ಯಲ್ಲೇಶ್. ಎಂ.ಡಿ. ಬಸವರಾಜ್, ಕಾರ್ಯದರ್ಶಿ ಕೃಷ್ಣಕುಮಾರ್, ಬಿ ಎಲ್ ರಾಜು, ಸದಸ್ಯರಾದ ಪುಟ್ಟಸ್ವಾಮಿಗೌಡ.ಬಿ ವಿ ರವಿಕುಮಾರ್, ನಾಗರಾಜು, ಬೇಕರಿ ಮಂಜುನಾಥ್ಶ, ಭರತ್, ಮುಖಂಡರಾದ ಬಿವಿ ದಿನೇಶ್, ಚೆಲುವರಾಜು, ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.