ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

| Published : Oct 03 2024, 01:31 AM IST

ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ನಾಗಮ್ಮ ಶಾಲೆಯ ಆವರಣದಿಂದ ಬದನವಾಳು ಕೇಂದ್ರದವರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪಾದಯಾತ್ರೆ ನಡೆಸಿ, ಕೇಂದ್ರದಲ್ಲಿನ ಮಹಾತ್ಮ ಗಾಂಧಿಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಕನ್ನಡಪ್ರಭ ವಾರ್ತೆ ನಂಜನಗೂಡು 1927ರಲ್ಲಿ ಮಹಾತ್ಮ ಗಾಂಧೀಜಿ ಅವರು ನಮ್ಮ ತಾಲೂಕಿನ ಬದನವಾಳು ಹಾಗೂ ತಗಡೂರು ಗ್ರಾಮಗಳಿಗೆ ಭೇಟಿ ನೀಡಿ, ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ಆರಂಭಿಸಿ ಇತಿಹಾಸ ನಿರ್ಮಿಸಿದ್ದಾರೆ ಎಂದು ಶಾಸಕ ದರ್ಶನ್ಧ್ರುವನಾರಾಯಣ ಹೇಳಿದರು.ತಾಲೂಕಿನ ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗಾಂಧೀಜಿಯವರು ಭೇಟಿ ನೀಡಿದ ಸಂದರ್ಭದ ಕುರುಹುಗಳು ಇನ್ನು ಗ್ರಾಮೋದ್ಯೋಗ ಕೇಂದ್ರದಲ್ಲಿ ಜೀವಾಂತವಾಗಿ ಉಳಿದಿವೆ. ಅಂದಿನಿಂದ ಇಂದಿನವರೆಗೂ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಮಹಿಳೆಯರು ಚರಕಗಳ ಮೂಲಕ ನೂಲನ್ನು ನೆಯ್ದು ಖಾದಿ ಬಟ್ಟೆ ತಯಾರಿಸುತ್ತಿದ್ದಾರೆ, ಕೇಂದ್ರವನ್ನು ಅಭಿವೃದ್ಧಿಪಡಿಸುವ ಸಲುವಾಗಿ ನಮ್ಮ ತಂದೆ ಆರ್ . ಧ್ರುವನಾರಾಯಣ ಹಗಲಿರುಳು ಶ್ರಮಿಸಿದ್ದರು ಎಂದು ಅವರು ತಿಳಿಸಿದರು.2027ಕ್ಕೆ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ 100 ವರ್ಷ:2027ಕ್ಕೆ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ 100 ವರ್ಷಗಳು ತುಂಬಲಿವೆ, ಅಂದು ರಾಹುಲ್ ಗಾಂಧಿ ಅವರನ್ನು ಕರೆಸಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರು ಹೇಳಿದರು.ಪಟ್ಟಣದ ನಾಗಮ್ಮ ಶಾಲೆಯ ಆವರಣದಿಂದ ಬದನವಾಳು ಕೇಂದ್ರದವರೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪಾದಯಾತ್ರೆ ನಡೆಸಿ, ಕೇಂದ್ರದಲ್ಲಿನ ಮಹಾತ್ಮ ಗಾಂಧಿಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರ ಸಭೆ ಅಧ್ಯಕ್ಷ ಶ್ರೀಕಂಠಸ್ವಾಮಿ, ಉಪಾಧ್ಯಕ್ಷೆ ರೇಹನಾ ಬಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠನಾಯಕ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಎಂ ಶಂಕರ್, ಜಿಪಂ ಮಾಜಿ ಸದಸ್ಯರಾದ ಕೆ. ಮಾರುತಿ, ಪುಷ್ಪ ನಾಗೇಶ್ ರಾಜ್, ತಾಪಂ ಮಾಜಿ ಅಧ್ಯಕ್ಷ ನಾಗೇಶ ರಾಜ್, ಕಾಂಗ್ರೆಸ್ ಉಸ್ತುವಾರಿ ಸೋಮೇಶ್, ನಗರಸಭಾ ಸದಸ್ಯರಾದ ಎಸ್.ಪಿ. ಮಹೇಶ್, ಗಂಗಾಧರ್, ವಿಜಯಲಕ್ಷ್ಮಿ, ಗಾಯತ್ರಿ ಮುರುಗೇಶ್, ಮುಖಂಡರಾದ ದೊರೆಸ್ವಾಮಿ ನಾಯಕ, ರವಿಪ್ರಕಾಶ್, ಕಳಲೆ ರಾಜೇಶ್, ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಡಿವೈಎಸ್ಪಿ ರಘು, ತಾಪಂ ಇಒ ಜೆರಾಲ್ಡ್ ರಾಜೇಶ್, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.