ಗಾಂಧೀಜಿ ಅವರು ನನ್ನ ಜೀವನವೇ ನನ್ನ ಸಂದೇಶ ಎಂಬ ನುಡಿಯಂತೆ, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಸತ್ಯ, ಅಹಿಂಸೆ, ಸ್ವಚ್ಛತೆಯ ಸಂದೇಶವನ್ನು ಸಾರಿದ ಮಹಾತ್ಮರಾಗಿದ್ದಾರೆ.
ಕಾರವಾರ: ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿಯವರು ಪುಷ್ಪನಮನ ಸಲ್ಲಿಸುವ ಮೂಲಕ ಶುಕ್ರವಾರ ಆಚರಿಸಿದರು.ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಿಇಒ ಅವರು, ಗಾಂಧೀಜಿ ಅವರು ನನ್ನ ಜೀವನವೇ ನನ್ನ ಸಂದೇಶ ಎಂಬ ನುಡಿಯಂತೆ, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಸತ್ಯ, ಅಹಿಂಸೆ, ಸ್ವಚ್ಛತೆಯ ಸಂದೇಶವನ್ನು ಸಾರಿದ ಮಹಾತ್ಮರಾಗಿದ್ದಾರೆ. ಅದೇ ರೀತಿ ಲಾಲ್ ಬಹುದ್ದೂರ್ ಶಾಸ್ತ್ರಿಯವರು ಸಹ ಈ ದೇಶದ ಎರಡನೇ ಪ್ರಧಾನಮಂತ್ರಿಯವರಾಗಿ ರಾಷ್ಟ್ರ ನಿರ್ಮಾಣದಲ್ಲಿ ಹಸಿರು ಕ್ರಾಂತಿ, ಶ್ವೇತ ಕ್ರಾಂತಿ ಮೂಲಕ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ್ದಾರೆ ಎಂದರು.ಜಿಲ್ಲಾ ಪಂಚಾಯತಿ ಆಡಳಿತ ವಿಭಾಗದ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್ ಅವರು ಕಾರ್ಯಕ್ರಮಕ್ಕೆ ಸ್ವಾಗತ ಕೋರಿ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಮಹಾತ್ಮ ಗಾಂಧೀಜಿಯವರ ಜಯಂತಿ ಮತ್ತು ಲಾಲ ಬಹಾದ್ದೂರ್ ಶಾಸ್ತ್ರಿ ಅವರ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ನಂತರ ಎಲ್ಲ ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸ್ವಚ್ಛತಾ ಶ್ರಮದಾನವನ್ನು ಕೈಗೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕರೀಂ ಅಸದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತ, ಜಿಲ್ಲಾ ಪಂಚಾಯಿತಿ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಿಬೇಟಿಯನ್ ಕಾಲನಿಯಲ್ಲಿ ಜಯಂತಿ ಆಚರಣೆಮುಂಡಗೋಡ: ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್ ಬಹಾದ್ದೂರ ಶಾಸ್ತ್ರೀ ಜಯಂತಿಯನ್ನು ಟಿಬೇಟಿಯನ್ ಕಾಲನಿ ಕ್ಯಾಂಪ್ ನಂಬರ್ ೧ ಗಂದೆನ್ ಜಾಂಗ್ತ್ಸೆಬೌದ್ಧ ಮಠದ ಆವರಣದ ಗಾಂಧೀಜಿ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮುಖಾಂತರ ಆಚರಿಸಲಾಯಿತು.ಈ ಸಂದರ್ಭದಲ್ಲಿ ಇಂಡೋ ಟಿಬೇಟ್ ಅಸೋಸಿಯೇಷನ್ ಹಿರಿಯ ಸದಸ್ಯ ಎನ್.ಡಿ. ಕಿತ್ತೂರ, ಅನ್ನದಾತ ರೈತ ಸಂಘಟನೆ ಜಿಲ್ಲಾ ಅಧ್ಯಕ್ಷ ಸೋಮಲಿಂಗ ಬೆಣ್ಣಿ, ಉಪಾಧ್ಯಕ್ಷರಾದ ರವಿ ಕೊಪ್ಪ, ಜಂಪಾ ಲೋಭಸಂಗ, ಮಲ್ಲಿಕಾರ್ಜುನ ಕಿತ್ತೂರ ಮತ್ತು ಹಿರಿಯ ಬೌದ್ಧ ಭಿಕ್ಕುಗಳು ಉಪಸ್ಥಿತರಿದ್ದರು.