ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿವಿಯ ಕ್ಯಾಂಪಸ್‌ನಲ್ಲಿ 80ನೇ ಸ್ವಾತಂತ್ರ್ಯ ದಿನ ಸಂಭ್ರಮದಿಂದ ಆಚರಿಸಲಾಯಿತು. ಮಾಹೆ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಧ್ವಜಾರೋಹಣ ಮಾಡಿದರು.

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿವಿಯ ಕ್ಯಾಂಪಸ್‌ನಲ್ಲಿ 80ನೇ ಸ್ವಾತಂತ್ರ್ಯ ದಿನ ಸಂಭ್ರಮದಿಂದ ಆಚರಿಸಲಾಯಿತು. ಮಾಹೆ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಧ್ವಜಾರೋಹಣ ಮಾಡಿದರು. ಮಾಹೆ ಕುಲಪತಿ ಡಾ. ಶರತ್ ಕೆ. ರಾವ್, ರಾಷ್ಟ್ರ ನಿರ್ಮಾಣದತ್ತ ನಮ್ಮ ಜವಾಬ್ದಾರಿಯನ್ನು ಸ್ವಾತಂತ್ರ್ಯ ದಿನ ನೆನಪಿಸುತ್ತದೆ. ಜ್ಞಾನ, ಆವಿಷ್ಕಾರ ಮತ್ತು ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಬಹಳ ದೊಡ್ಡದು ಎಂದರು.ಮಾಹೆಯ ಹಿರಿಯ ಅಧಿಕಾರಿಗಳಾದ ಸಹ ಕುಲಪತಿ ಡಾ. ಕರುಣಾಕರ್ ಎ. ಕೋಟೆಗಾರ್, ಮೇ.ಜ. (ಡಾ.) ಮ್ಯಾಥ್ಯೂಸ್ ಜೇಕಬ್, ಕುಲಸಚಿವ ಡಾ. ಪಿ. ಗಿರಿಧರ್ ಕಿಣಿ ಹಾಗೂ ಸಿಒಒ ಡಾ. ಆನಂದ್ ವೇಣುಗೋಪಾಲ್ ಉಪಸ್ಥಿತರಿದ್ದರು. ಎಂಸಿಒಎನ್ ಡೀನ್ ಡಾ. ಜುದಿತ್ ಏಂಜಲಿಟ್ಟಾ ನೊರೊನ್ಹಾ ಸ್ವಾಗತಿಸಿ, ಎಂಸಿಒಎನ್‌ನ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗದ ಉಪನ್ಯಾಸಕಿ ಪ್ರತಿಭಾ ಲಿಡಿಯಾ ಬ್ರಾಗ್ಸ್ ನಿರೂಪಿಸಿದರು.