ಮಾಹೆಯ ಎಂಸಿಒಎನ್‌ಗೆ ರಾಷ್ಟ್ರಮಟ್ಟದಲ್ಲಿ ಮತ್ತೆ ಅಗ್ರಸ್ಥಾನ

| Published : May 25 2024, 12:53 AM IST

ಮಾಹೆಯ ಎಂಸಿಒಎನ್‌ಗೆ ರಾಷ್ಟ್ರಮಟ್ಟದಲ್ಲಿ ಮತ್ತೆ ಅಗ್ರಸ್ಥಾನ
Share this Article
  • FB
  • TW
  • Linkdin
  • Email

ಸಾರಾಂಶ

ಮಾಹೆಯ ಅಂಗಸಂಸ್ಥೆಯಾಗಿರುವ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ (ಎಂ.ಸಿ.ಓ.ಎನ್.) ಗೆ ಬಿಎಸ್ಸಿ ನರ್ಸಿಂಗ್ ವಿಭಾಗದಲ್ಲಿ ಎಜುಕೇಶನ್ ವರ್ಲ್ಡ್ ಇಂಡಿಯಾ ಹೈಯರ್ ಎಜುಕೇಶನ್ ರಾಂಕಿಂಗ್ 2024-2025 ರಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದೆ.

ಕನ್ನಡಪ್ರಭ ವಾರ್ತೆ ಮಣಿಪಾಲ

ಮಾಹೆಯ ಅಂಗಸಂಸ್ಥೆಯಾಗಿರುವ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ (ಎಂ.ಸಿ.ಓ.ಎನ್.) ಗೆ ಬಿಎಸ್ಸಿ ನರ್ಸಿಂಗ್ ವಿಭಾಗದಲ್ಲಿ ಎಜುಕೇಶನ್ ವರ್ಲ್ಡ್ ಇಂಡಿಯಾ ಹೈಯರ್ ಎಜುಕೇಶನ್ ರಾಂಕಿಂಗ್ 2024-2025 ರಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದೆ.

ಈ ಕಾಲೇಜು ಭಾರತದ ಶ್ರೇಷ್ಟ ನರ್ಸಿಂಗ್ ಶಿಕ್ಷಣ ಮತ್ತು ಸಂಶೋಧನೆಗಾಗಿರುವ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿದೆ. ಇಲ್ಲಿ 1:10 ರ ಅಧ್ಯಾಪಕ-ವಿದ್ಯಾರ್ಥಿ ಅನುಪಾತವಿದ್ದು, ಶೇ.50 ರಷ್ಟು ಅಧ್ಯಾಪಕರು ಪಿಎಚ್‌ಡಿ ಪದವಿ ಹೊಂದಿದ್ದಾರೆ. ಉಳಿದ ಅಧ್ಯಾಪಕರು ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದಾರೆ. ಅಧ್ಯಾಪಕರ ಸಾಮರ್ಥ್ಯ, ಉದ್ಯೋಗಾವಕಾಶ, ಅಧ್ಯಾಪಕರ ಕಲ್ಯಾಣ ಮತ್ತು ಅಭಿವೃದ್ಧಿ, ಮೂಲಸೌಕರ್ಯ ಮತ್ತು ಆಡಳಿತದ ಗುಣಮಟ್ಟ ಮುಂತಾದ ವಿವಿಧ ನಿಯತಾಂಕಗಳಲ್ಲಿ ಮೌಲ್ಯಮಾಪನ ಮಾಡಲಾಗಿದ್ದು, ಸಂಸ್ಥೆಯು 700 ರಲ್ಲಿ 624 ಅಂಕಗಳೊಂದಿಗೆ ನಂ. 1 ಸ್ಥಾನ ಪಡೆದುಕೊಂಡಿದೆ. 2023 ರಲ್ಲಿ 620 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು.

ಈ ಸಾಧನೆ ಕುರಿತು ಮಾಹೆಯ ಉಪಕುಲಪತಿ ಲೆ.ಜ. ಡಾ.ಎಂ.ಡಿ. ವೆಂಕಟೇಶ್, ಈ ಮನ್ನಣೆಯು ನಮ್ಮ ಅಸಾಧಾರಣ ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ನಿರಂತರ ಸಮರ್ಪಣೆ ಮತ್ತು ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಕಳೆದ ವರ್ಷಕ್ಕಿಂತಲೂ ಸುಧಾರಿತ ಸ್ಕೋರ್ ಪಡೆದಿರುವುದು ನಮ್ಮ ಉನ್ನತ-ಶ್ರೇಣಿಯ ಶಿಕ್ಷಣವನ್ನು ಒದಗಿಸುವ ಮತ್ತು ನಿರಂತರ ಸುಧಾರಣೆಯ ವಾತಾವರಣವನ್ನು ಬೆಳೆಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ. ರಾಷ್ಟ್ರೀಯವಾಗಿ ಮತ್ತು ಜಾಗತಿಕವಾಗಿ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡುವ ಆರೋಗ್ಯ ವೃತ್ತಿಪರರನ್ನು ಪೋಷಿಸಲು ನಾವು ಸದಾ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಮಾಹೆಯ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿ ಡಾ.ಶರತ್ ಕುಮಾರ್ ರಾವ್ ಅವರು ಸಂಸ್ಥೆ ಮತ್ತು ಸಂಸ್ಥೆಯ ಅಧ್ಯಾಪಕರನ್ನು ಅಭಿನಂದಿಸಿದ್ದಾರೆ.