ಸಾರಾಂಶ
ಜಮಖಂಡಿ ನಗರದ ಖಾಸಗಿ ಹೋಟೆಲೊಂದರಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಟನೆ ನೀಡಲು ನಿರಾಕರಿಸಿದ ಪ್ರಸಂಗ ನಡೆಯಿತು.
ಕನ್ನಡಪ್ರಭ ವಾರ್ತೆ ಜಮಖಂಡಿ
ನಗರದ ಖಾಸಗಿ ಹೋಟೆಲೊಂದರಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಟನೆ ನೀಡಲು ನಿರಾಕರಿಸಿದ ಪ್ರಸಂಗ ನಡೆಯಿತು.ರಾಜ್ಯದ ಮೂಲೆ ಮೂಲೆಯಿಂದ 18ಕ್ಕೂ ಅಧಿಕ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳ ಸಭೆಗೆ ಹಾಜರಾಗಿದ್ದರು. ಸಂಜೆ ೪ ರಿಂದ ೬ರ ವರೆಗೆ ನಿರಂತರ 2 ಗಂಟೆ ಸಭೆ ನಡೆಯಿತು. ಸಭೆಯಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆದವು ಎನ್ನಲಾಗಿದೆ. ಬಳಿಕ ಮಾಧ್ಯಮದವರು ರಾಜ್ಯಾಧ್ಯಕ್ಷರನ್ನು ಪತ್ರಕರ್ತರು ಬಳ್ಳಾರಿ ಜಿಲ್ಲೆ ಸಂಡೂರು ಹಾಗೂ ಕಲ್ಲಹಳ್ಳಿ ಗ್ರಾಮದಲ್ಲಿ ನಡೆಯಬೇಕಾದ ಸಭೆ ಏಕೆ ರದ್ದಾಯಿತು ಎಂಬ ಪ್ರಶ್ನೆಗೆ ಮತ್ತು ಸಭೆಯಲ್ಲಿ ಯಾವ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎಂಬ ಪ್ರಶ್ನೆಗೆ ಉತ್ತರಿಸದೆ ಸಿಡಿಮಿಡಿಗೊಂಡರು.
ಸಭೆಯಲ್ಲಿ ಜರುಗಿದ ವಿಷಯದ ಮತ್ತು ನಿರ್ಣಯದ ಕುರಿತು ಇನ್ನೂ ಸ್ಪಷ್ಟನೆ ನೀಡಿಲ್ಲ. ಅದರಲ್ಲಿನ ತೀರ್ಮಾನದ ಬಗ್ಗೆ ರಾಜ್ಯಾಧ್ಯಕ್ಷರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ ಎಂದು ಹೇಳಿದ ತಾಲೂಕು ಅಧ್ಯಕ್ಷ ಸಂತೋಷ ತಳಕೇರಿ ಹೇಳಿದರು.