ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖರನ್ನು ವಶಕ್ಕೆ ಪಡೆದಿರುವ ಕ್ರಮ ಖಂಡಿಸಿ ಧಾರವಾಡದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು.
ಧಾರವಾಡ:
ದೆಹಲಿಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಅಕ್ರಮಗಳನ್ನು ವಿರೋಧಿಸಿ ಭಾರತೀಯ ಚುನಾವಣಾ ಆಯೋಗದ ಪ್ರಧಾನ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖರನ್ನು ವಶಕ್ಕೆ ಪಡೆದಿರುವ ಕ್ರಮ ಖಂಡಿಸಿ ನಗರದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರುನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಧ್ವನಿ ಎತ್ತಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೌರಮ್ಮ ಬಲೋಗಿ, ಗ್ಯಾರಂಟಿ ಸಮಿತಿ ಸದಸ್ಯರಾದ ಸವಿತಾ ಶಿಂಧೆ, ಬ್ಲಾಕ್ ಅಧ್ಯಕ್ಷರಾದ ದೀಪಾ ನೀರಲಕಟ್ಟಿ, ಲಕ್ಷ್ಮೀ ಚಿಕ್ಕತೋಟದ, ಸುಮಾ ಮಾಳಗಿ, ಪವಿತ್ರಾ ಮುಗಳಿ, ಶಾರದಾ ನಿಗಡಿ, ವಿಜಯಲಕ್ಷ್ಮೀ ಆನಂದ, ರತ್ನವ್ವ ದೊಡ್ಡಮನಿ ಹಾಗೂ ಶೋಭಾ ಪಚಂಗೆ ಇದ್ದರು.