ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ವತಿಯಿಂದ ಬೈಲೂರು ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯಪೂರ್ಣ ಆಹಾರ ಪದ್ಧತಿ’ ಕುರಿತು ಕಾರ್ಯಾಗಾರ ನಡೆಯಿತು.

ಕಾರ್ಕಳ: ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ವತಿಯಿಂದ ಬೈಲೂರು ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯಪೂರ್ಣ ಆಹಾರ ಪದ್ಧತಿ’ ಕುರಿತು ಕಾರ್ಯಾಗಾರ ನಡೆಯಿತು.

ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ತೇಜಸ್ವಿನಿ ಅವರು ಸಾಂಪ್ರದಾಯಿಕ ಹಾಗೂ ಆಧುನಿಕ ಆಹಾರ ಪದ್ಧತಿಗಳ ಕುರಿತು ಮಾಹಿತಿ ನೀಡಿ, ಸಮತೋಲಿತ ಆಹಾರದ ಮಹತ್ವವನ್ನು ವಿವರಿಸಿದರು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾತನಾಡಿ, ಎಣ್ಣೆ ಮತ್ತು ಕೊಬ್ಬಿನ ಅತಿಯಾದ ಬಳಕೆಯನ್ನು ಕಡಿಮೆ ಮಾಡಿ ಸೊಪ್ಪು, ತರಕಾರಿ ಹಾಗೂ ಮೊಳಕೆಕಾಳುಗಳಂತಹ ಪೌಷ್ಟಿಕ ಆಹಾರಗಳನ್ನು ಸೇವಿಸುವಂತೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಸೀತಾರಾಮ್ ಭಟ್, ಕಾರ್ಯಾಗಾರದಲ್ಲಿ ಪಡೆದ ಮಾಹಿತಿಯನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರವೀಂದ್ರ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಮಾಲಿನಿ ಜೆ. ಶೆಟ್ಟಿ, ವಿನಯ ಡಿ. ಬಂಗೇರ, ಶೋಭಾ ಭಾಸ್ಕರ್, ಉಷಾ ಜಯಪ್ರಕಾಶ್, ಲಕ್ಷ್ಮೀ ಮಂಜುನಾಥ್, ಜ್ಯೋತಿ ರಮೇಶ್, ವಿನುತಾ ಆಚಾರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಆರೋಗ್ಯಾಧಿಕಾರಿ ತೇಜಸ್ವಿನಿ ಅವರನ್ನು ಫಲ-ಪುಷ್ಪ ನೀಡಿ ಗೌರವಿಸಲಾಯಿತು.