ಸಾರಾಂಶ
ಪೊಲೀಸ್ ಇಲಾಖೆಯ ಮಾಹಿತಿ ಪ್ರವಕಾರ 2025ರ ಜುಲೈ ಅಂತ್ಯದವರೆಗೆ ರಾಜ್ಯದಲ್ಲಿ ಸುಮಾರು 340 ಅತ್ಯಾಚಾರ ಪ್ರಕರಣ, 3089 ಪೋಕ್ಸೋ ಪ್ರಕರಣ,
ಕನ್ನಡಪ್ರಭ ವಾರ್ತೆ ಮೈಸೂರು
ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ, ಲೈಂಗಿಕ ಕಿರುಕುಳ, ಅತ್ಯಾಚಾರ ಖಂಡಿಸಿ ಹಾಗೂ ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೇ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮಹಿಳೋದಯ ಮಹಿಳಾ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶನಿವಾರ ಪ್ರತಿಭಟಿಸಿದರು.ಪೊಲೀಸ್ ಇಲಾಖೆಯ ಮಾಹಿತಿ ಪ್ರವಕಾರ 2025ರ ಜುಲೈ ಅಂತ್ಯದವರೆಗೆ ರಾಜ್ಯದಲ್ಲಿ ಸುಮಾರು 340 ಅತ್ಯಾಚಾರ ಪ್ರಕರಣ, 3089 ಪೋಕ್ಸೋ ಪ್ರಕರಣ, 3643 ಲೈಂಗಿಕ ಕಿರುಕುಳ ಪ್ರಕರಣ, 25 ಸಾವಿರ ಬಾಲ ಗರ್ಭಿಣಿಯರಾಗಿರುವುದು ಗೊತ್ತಾಗಿದೆ. ದಾಖಲಾದ ಪ್ರಕರಣಗಳಲ್ಲಿ ಅನೇಕವು ತಾರ್ಕಿಕ ಅಂತ್ಯ ಕಾಣದಿರುವುದು ಮಕ್ಕಳು ಹಾಗೂ ಮಹಿಳೆಯರಲ್ಲಿ ಭಯದ ವಾತಾವರಣ ಮೂಡಿಸಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ, ಕಠಿಣ ಶಿಕ್ಷೆ ವಿಧಿಸಬೇಕು. ಸಮಾಜದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಕಡಿಮೆಯಾಗಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು. ವಿಧವಾ, ವೃದ್ಧಾಪ್ಯ ಹಾಗೂ ವಿಶೇಷ ಚೇತನರ ಪಿಂಚಣಿಯನ್ನು 3 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದರು.ಒಕ್ಕೂಟದ ಅಧ್ಯಕ್ಷೆ ಭುವನೇಶ್ವರಿ, ಆರೋಗ್ಯಮೇರಿ, ಶಾಂತಾ, ದಾರ್ತಿ ಮೊದಲಾದವರು ಇದ್ದರು.-----------------eom/mys/shekar/