ಸಾರಾಂಶ
ಇಲ್ಲಿನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ಪುರಸಭೆ, ಸಮುದಾಯ ಆರೋಗ್ಯ ಕೇಂದ್ರ, ಪೊಲೀಸ್ ಇಲಾಖೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆರೋಗ್ಯ ತಪಾಸಣೆ ಉಚಿತ ಶಿಬಿರ ನಡೆಯಿತು.
ರೋಗ್ಯ ತಪಾಸಣೆ ಉಚಿತ ಶಿಬಿರ
ಕನ್ನಡಪ್ರಭ ವಾರ್ತೆ ಕುರುಗೋಡುಇಲ್ಲಿನ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ಪುರಸಭೆ, ಸಮುದಾಯ ಆರೋಗ್ಯ ಕೇಂದ್ರ, ಪೊಲೀಸ್ ಇಲಾಖೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆರೋಗ್ಯ ತಪಾಸಣೆ ಉಚಿತ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ನರಸಪ್ಪ, ಆಧುನಿಕ ಜೀವನ ಶೈಲಿಯ ಪರಿಣಾಮ ನಮಗರಿವಿಲ್ಲದೆ ಮನುಷ್ಯರ ದೇಹದಲ್ಲಿ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಆರೋಗ್ಯಕರ ಜೀವನಶೈಲಿ ರೂಡಿಸಿಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ಸಲಹೆ ನೀಡಿದರು.ಸಾಮಾಜಿಕ ಕಳಕಳಿಯ ಸಂಘಟನೆಗಳು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಆರೋಗ್ಯ ತಪಾಸಣೆಗೆ ಉಚಿತ ಶಿಬಿರ ಆಯೋಜಿಸಿದ್ದಾರೆ. ಜನರು ಶಿಬಿರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಕಾವೇರಿ ಆಸ್ಪತ್ರೆಯ ಹೃದಯ ರೋಗ ತಜ್ಞ ಡಾ, ಸುರೇಂದ್ರ, ಎಲುಬು, ಕೀಲು ತಜ್ಞ ವೈದ್ಯರಾದ ಡಾ. ಜಗದೀಶ್, ಡಾ. ಪ್ರತಾಪ್ ಮತ್ತು ಡಾ. ಸೈಯದ್ ಮುಕ್ತಿ ಶಿಬಿರದಲ್ಲಿ ಹೃದಯ ರೋಗ ಮತ್ತು ಮಂಡಿಚಿಪ್ಪು ಸಮಸ್ಯೆ ತಪಾಸಣೆ ಮಾಡಿದರು. ೩೫೦ಕ್ಕೂ ಅಧಿಕ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.೨೫ ಜನರನ್ನು ಮಂಡಿಚಿಪ್ಪು ಬದಲಾವಣೆ ಮತ್ತು ೧೦ ಜನರಿಗೆ ಹೃದಯ ಶಸ್ತ್ರಚಿಕಿತ್ಸೆಗೆ ಗುರುತಿಸಲಾಯಿತು.
ಪುರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ, ಸಂಸ್ಥೆಯ ತಾಲೂಕು ಯೋಜನಾಧಿಕಾರಿ ರಾಘವೇಂದ್ರ, ಮೇಲ್ವಿಚಾರಕರಾದ, ರೇಖಾ, ಪ್ರಭು ಮತ್ತು ಮಹಾಂತೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ವಾಗೀಶ್ ಆಶಾಪುರ ಮತ್ತು ಚೇಗೂರು ಷಣ್ಮುಖ, ಕಾವೇರಿ ಆಸ್ಪತ್ರೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಮತ್ತು ಪುರಸಭೆ ಸದಸ್ಯರು ಇದ್ದರು.