ಸ್ವಚ್ಛತೆ ಕಾಪಾಡಿ ಡೆಂಘೀ ತಡೆಗಟ್ಟಲು ಸಹಕರಿಸಿ

| Published : May 26 2024, 01:34 AM IST

ಸಾರಾಂಶ

ದಾಬಸ್‌ಪೇಟೆ: ಡೆಂಘೀ ಜ್ವರ ಸೊಳ್ಳೆಗಳಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುವ ಸಾಧ್ಯತೆಗಳು ಹೆಚ್ಚು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಸತೀಶ್ ಸಲಹೆ ನೀಡಿದರು.

ದಾಬಸ್‌ಪೇಟೆ: ಡೆಂಘೀ ಜ್ವರ ಸೊಳ್ಳೆಗಳಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುವ ಸಾಧ್ಯತೆಗಳು ಹೆಚ್ಚು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಸತೀಶ್ ಸಲಹೆ ನೀಡಿದರು.

ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಘೀ ನಿಯಂತ್ರಣ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು ಯಾವುದೇ ಕಾಯಿಲೆಯ ಅದರಲ್ಲೂ ಜ್ವರದ ಲಕ್ಷಣಗಳು ಕಂಡು ಬಂದ ಕೂಡಲೇ ಸಮೀಪದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಮುನ್ನಚ್ಚರಿಕಾ ಕ್ರಮಗಳನ್ನು ಅನುಸರಿಸಿ ರೋಗ ಹರಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಸಾಂಕ್ರಾಮಿಕ ರೋಗ ಹರಡುವ ಮುನ್ನವೇ ನಾವು ಜಾಗ್ರತೆಯಿಂದ ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಆಗ ಮಾತ್ರ ರೋಗ ಹರಡುವುದಿಲ್ಲ. ಹಾಗಾಗಿ ಪ್ರತಿಯೊಬ್ಬರು, ಮನೆಯಂಗಳ, ಸುತ್ತಮುತ್ತ, ಬೀದಿಗಳಲ್ಲಿ, ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪರಸ್ಪರ ಜಾಗೃತಿಯಿಂದ ಪರಿಸರ ಕಾಳಜಿಯಿಂದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು ಎಂದು ಹೇಳಿದರು.

ಆರೋಗ್ಯಾಧಿಕಾರಿ ಅಶ್ವಿನಿ ಮಾತನಾಡಿ, ರಾಷ್ಟ್ರೀಯ ಡೆಂಘೀ ನಿಯಂತ್ರಣ ದಿನಾಚರಣೆಯನ್ನು ಈ ಬಾರಿ ಸಮುದಾಯದೊಂದಿಗೆ ಸೇರಿ ಡೆಂಘೀ ಜ್ವರ ನಿಯಂತ್ರಿಸೋಣ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಡೆಂಘೀ ಜ್ವರ ಸೊಳ್ಳೆಯಿಂದ ಹರಡುವಂತಹ ಕಾಯಿಲೆಯಾಗಿದೆ. ಅದಕ್ಕೆ ಸೊಳ್ಳೆಗಳು ಉತ್ಪತ್ತಿಯಾಗದಂತೆ ನಾವು ಮುಂಜಾಗ್ರತೆ ವಹಿಸಬೇಕು. ಈಗಾಗಲೇ ಮಳೆಗಾಲ ಆರಂಭವಾಗಿದೆ. ಎಲ್ಲೆಂದರಲ್ಲಿ ಮಳೆ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ಮನೆಯ ಸುತ್ತಮುತ್ತಲಿನ ಕಸ, ತೆಂಗಿನ ಸರಟೆ, ಮುರಿದ ಪ್ಲಾಸ್ಟಿಕ್‌ ವಸ್ತುಗಳನ್ನು ಸ್ವಚ್ಛಗೊಳಿಸಿಕೊಳ್ಲಬೇಕು. ಇವುಗಳಲ್ಲಿ ಮಳೆ ನೀರು ನಿಂತರೆ ಹೆಚ್ಚು ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ಡೆಂಘೀ ಜ್ವರ ಹರಡುವ ಸಾಧ್ಯತೆಗಳಿವೆ. ಆದ್ದರಿಂದ ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಸುತ್ತ-ಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಜಯಲಕ್ಷ್ಮಮ್ಮ, ಆಶಾ, ಜಯಲಕ್ಷ್ಮೀ, ಪೊಲೀಸ್ ಸಿಬ್ಬಂದಿ ನವೀನ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.ಪೋಟೋ 6 :

ದಾಬಸ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಘೀ ನಿಯಂತ್ರಣ ದಿನಾಚರಣೆ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿ ಡಾ.ಸತೀಶ್ ಚಾಲನೆ ನೀಡಿದರು.