ಸಾರಾಂಶ
ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಡೆಂಘೀ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಕಾಪಾಡಲು ನಗರಸಭೆ ಮುಂದಾಗಿದೆ. ಚಂರಂಡಿಗಳು ಹಾಗೂ ರಸ್ತೆ ಬದಿ ಸ್ವಚ್ಛತಾ ಕಾರ್ಯ ಆರಂಭಿಸಿದೆ.ನಗರದಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ನಗರಸಭೆ ನಿರ್ಲಕ್ಷ್ಯ ವಹಿಸಿರುವ ಕುರಿತು ‘ಕನ್ನಡಪ್ರಭ’ ವರದಿ ಪ್ರಕರಟಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ನಗರಸಭೆ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದೆ.
ಮನೆ ಸುತ್ತ ಸ್ವಚ್ಛತೆ ಕಾಪಾಡಿಸಾರ್ವಜನಿಕರು ತಮ್ಮ ಮನೆ ಹಾಗೂ ಮನೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಮೂಲಕ ಡೆಂಘೀ ಪ್ರಕರಣಗಳು ಬಾರದಂತೆ ಕಾಪಾಡಿಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತೆ ಡಿ.ಎಂ.ಗೀತಾ ಹೇಳಿದರು. ನಗರದ ನಾನಾ ವಾರ್ಡ್‌ಗಳಿಗೆ ನಗರಸಭೆ ಸಿಬ್ಬಂದಿ ಜತೆ ಭೇಟಿ ನೀಡಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಮಾತನಾಡಿದ ಅವರು, ನಗರದಲ್ಲಿ 31 ವಾರ್ಡ್‌ನಲ್ಲಿ ನಗರಸಭೆ ವತಿಯಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
ಡೆಂಘೀ ತಡೆಗೆ ಸ್ವಚ್ಛತೆ ಕಾಪಾಡಿಸಾರ್ವಜನಿಕರು ಸಹ ತಮ್ಮ ಮನೆಗಳಲ್ಲಿ ನೀರಿನ ತೊಟ್ಟಿ ಹಾಗೂ ಮನೆಯ ಚಾವಣಿಯಲ್ಲಿ ಮಳೆ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ ಜ್ವರಕ್ಕೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಸ್ವಚ್ಛತೆಯಿಂದ ಮಾತ್ರ ಈ ಮಹಾಮಾರಿ ಕಾಯಿಲೆಯನ್ನು ತಡೆಯಬಹುದು ಎಂದರು.
ಪ್ರತಿನಿತ್ಯ ನಗರಸಭೆ ವತಿಯಿಂದ ಕಸ ಶೇಖರಣೆ ವಾಹನ ನಿಮ್ಮ ಮನೆಗಳ ಮುಂದೆ ಬಂದು ಕಸ ಸಂಗ್ರಹಿಸುತ್ತದೆ. ಮನೆಯವರು ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡಬೇಕು ಎಂದು ಮನವಿ ಮಾಡಿದರು. ಸಾರ್ವಜನಿಕರ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕಿದೆ ಎಂದರುಚರಂಡಿಗಳ ಸ್ವಚ್ಛತೆಗೆ ಕ್ರಮ
ರಾಜ್ಯದಾದ್ಯಂತ ಡೆಂಘೀ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ ಅಲರ್ಟ್ ಆಗಿದ್ದು ನಗರಸಭೆ ಸಿಬ್ಬಂದಿ ತಂಡಗಳನ್ನು ರಚಿಸುವ ಮೂಲಕ ಸ್ವಚ್ಛತೆಗೆ ಗೊತ್ತು ನೀಡಲಾಗುತ್ತಿದೆ. ನಗರದಲ್ಲಿ ಈಗಾಗಲೇ 12 ಡೆಂಘೀ ಪರಕರಣಗಳು ಪತ್ತೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಚರಂಡಿಗಳ ಸ್ವಚ್ಛತೆ ಹಾಗೂ ರಸ್ತೆಗಳ ಬದಿಯಲ್ಲಿನ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಲಾಗುತ್ತಿದೆ ಎಂದು ನಗರಸಭೆ ಆರೋಗ್ಯ ನಿರೀಕ್ಷಕರಾದ ನವೀನ್ ತಿಳಿಸಿದರು.