ಸಾರಾಂಶ
- ಹೊನ್ನಾಳಿಯ ಬಾಲರಾಜ್ ಘಾಟ್‌ನಲ್ಲಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಶಾಸಕ ಶಾಂತನಗೌಡ
- - -ಕನ್ನಡಪ್ರಭ ವಾರ್ತೆ ಹೊನ್ನಾಳಿ
ಪಟ್ಟಣದ ಬಾಲರಾಜ್ ಘಾಟ್ ಪ್ರದೇಶದಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ತುಂಗಭದ್ರಾ ನದಿ ನೀರು ಹೆಚ್ಚಾಗಿ ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಸಮಸ್ಯೆ ಸೃಷ್ಠಿಯಾಗುತ್ತಿದೆ. ಈ ಬಗ್ಗೆ ಸ್ಥಳೀಯರು ನದಿಗೆ ತಡೆಗೋಡೆ ನಿರ್ಮಿಸುವಂತೆ ಅನೇಕ ದಶಕಗಳಿಂದ ಬೇಡಿಕೆ ಸಲ್ಲಿಸುತ್ತಲೇ ಬರುತ್ತಿದ್ದರು. ಅವರ ಬೇಡಿಕೆ ಇದೀಗ ಸರ್ಕಾರದ ಎಸ್.ಡಿ.ಆರ್.ಎಫ್. ನಿಧಿಯಿಂದ ಈಡೇರುತ್ತಿದ್ದು, ₹6.5 ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣಕ್ಕೆಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ಸೋಮವಾರ ಸಂಜೆ ಬಾಲರಾಜ್ ಘಾಟ್‌ನಲ್ಲಿ ತಡೆಗೋಡೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪ್ರತಿವರ್ಷ ಮಳೆ ಬಂದಾಗ ನದಿ ನೀರಿನಮಟ್ಟ ಹೆಚ್ಚಾಗಿ ಪ್ರವಾಹ ಬಂದು ನದಿ ಪಾತ್ರದಲ್ಲಿನ ಮನೆಗಳಿಗೆ ನೀರು ನುಗ್ಗುತ್ತಿತ್ತು. ಈ ಕಾರಣದಿಂದ ಇಲ್ಲಿನ ನಿವಾಸಿಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದರು.
ಇಲ್ಲಿ ನಿರ್ಮಾಣ ಆಗಲಿರುವ ತಡೆಗೋಡೆಯು 240 ಮೀಟರ್ ಉದ್ದ ಹಾಗೂ 10 ಮೀಟಲ್ ಎತ್ತರ ಇರಲಿದೆ. ಈ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ನಿರ್ವಹಿಸಲಾಗುತ್ತದೆ. ಯಾವುದೇ ಕಾರಣಕ್ಕೂ ಕಾಮಗಾರಿ ಕಳಪೆಯಾಗದಂತೆ ಸ್ಥಳೀಯರು ಸಹ ಗಮನಹರಿಸಬೇಕು. ನದಿಪಾತ್ರದ ಅನೇಕ ಗ್ರಾಮಗಳಲ್ಲಿ ಈ ಸಮಸ್ಯೆಇದೆ. ಆ ಭಾಗಗಳಲ್ಲಿ ಕೂಡ ತಡೆಗೋಡೆ ನಿರ್ಮಾಣದ ಅವಶ್ಯಕತೆ ಕಂಡುಬಂದಿದೆ. ಇದಕ್ಕಾಗಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.ಗದಗದಿಂದ ಹೊನ್ನಾಳಿ, ಈ ರಸ್ತೆಯ ವಿಸ್ತರಣೆ ಕೆಲಸ ಪ್ರಗತಿಯಲ್ಲಿದೆ. ಸರ್ಕಾರ ನಿಗದಿಪಡಿಸಿರುವ ಅಳತೆಯಂತೆಯೇ ರಸ್ತೆ ಅಗಲೀಕರಣ ಆಗಲಿದೆ. ಈ ಹಂತದಲ್ಲಿ ಏನಾದರೂ ಸಮಸ್ಯೆ, ಲೋಪಗಳು ಕಂಡುಬಂದಲ್ಲಿ ಸಾರ್ವಜನಿಕರು ನೇರವಾಗಿ ಗಮನಕ್ಕೆ ತಂದರೆ ಖುದ್ದಾಗಿ ಪರಿಶೀಲಿಸಿ, ಸಮಸ್ಯೆ ಬಗೆಹರಿಸಲು ಸಿದ್ಧ ಎಂದು ಶಾಸಕರು ಭರವಸೆ ನೀಡಿದರು.
ಹೊನ್ನಾಳಿ ಉಪವಿಭಾಗಾಧಿಕಾರಿ ಎಚ್.ಬಿ. ಚನ್ನಪ್ಪ, ತಹಸೀಲ್ದಾರ್ ರಾಜೇಶ್ ಕುಮಾರ್, ಜಿ.ಪಂ. ಎಂಜಿನಿಯರಿಂಗ್ ಇಲಾಖೆ ಎ.ಇ.ಇ. ಅಶೋಕ್ ಪುರಸಭೆ ಅಧ್ಯಕ್ಷ ಎ.ಕೆ.ಮೈಲಪ್ಪ, ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಎಂ. ಸುರೇಶ್, ಸದಸ್ಯರಾದ ಧರ್ಮಪ್ಪ, ಬಾಬು ಹೋಬಳದಾರ್, ರಾಜೇಂದ್ರ, ನಾಮನಿರ್ದೇಶಿತ ಸದಸ್ಯರಾದ ಮಾದಪ್ಪ, ರವಿ, ರೇವಣಸಿದ್ದಪ್ಪ ಮೂಲಿ, ಮುಖ್ಯಾಧಿಕಾರಿ ಟಿ.ಲೀಲಾವತಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಎಚ್.ಎ. ಉಮಾಪತಿ, ಮುಖಂಡರಾದ ಬಿ,ಸಿದ್ದಪ್ಪ, ಆರ್.ನಾಗಪ್ಪ, ಚಂದ್ರಗುಂಡಾ, ವಿಜೇಂದ್ರಪ್ಪ, ಎಚ್.ಬಿ. ಅಣ್ಣಪ್ಪ, ಗಿರೀಶ್ ಇನ್ನಿತರ ಮುಖಂಡರು ಇದ್ದರು.- - -
-11ಎಚ್.ಎಲ್.ಐ1.ಜೆಪಿಜಿ:ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ ಸಮೀಪ ತುಂಗ್ರಭದ್ರಾ ನದಿಗೆ ₹6.5 ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಶಾಸಕ ಡಿ.ಜಿ.ಶಾಂತನಗೌಡ ಭೂಮಿಪೂಜೆ ನೆರವೇರಿಸಿದರು.
;Resize=(128,128))
;Resize=(128,128))
;Resize=(128,128))