ಅಡುಗೆ ಸಿಬ್ಬಂದಿ ಮನೆಯಲ್ಲಿ ನಿಮ್ಮ ಮಕ್ಕಳನ್ನು ಕಾಣುವಷ್ಟೇ ಪ್ರೀತಿಯಿಂದ ಶಾಲಾ ವಿದ್ಯಾರ್ಥಿಗಳನ್ನೂ ಕಾಣಬೇಕು, ಅದು ನಿಮ್ಮ ಮಕ್ಕಳಿಗೂ ಶ್ರೇಯಸ್ಕರ.ಅಡುಗೆ ಕೋಣೆ ಶುಭ್ರವಾಗಿದ್ದರೆ ಮಾತ್ರ ಅಡುಗೆಯಲ್ಲೂ ಶುಚಿತ್ವ ಕಾಪಾಡಲು ಸಾಧ್ಯ. ಪಾತ್ರೆಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರು, ಗುಣಮಟ್ಟದ ತರಕಾರಿ ಬಳಕೆ ಉತ್ತಮ ಬಿಸಿಯೂಟ ತಯಾರಿಕೆಗೆ ಅತಿ ಮುಖ್ಯ.
ಕನ್ನಡಪ್ರಭ ವಾರ್ತೆ ಕೋಲಾರಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿ ಶಾಲಾ ಮಕ್ಕಳನ್ನು ತಮ್ಮ ಮಕ್ಕಳಂತೆ ಭಾವಿಸಿ, ಊಟದಲ್ಲಿ ಶುಚಿ, ರುಚಿ, ಗುಣಮಟ್ಟ ಇರುವಂತೆ ನೋಡಿಕೊಳ್ಳಬೇಕು ಎಂದು ಅಕ್ಷರದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ತಿಮ್ಮರಾಯಪ್ಪ ಕರೆ ನೀಡಿದರು.ತಾಲೂಕಿನ ವೇಮಗಲ್ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ಶಕ್ತಿ ಪೋಷಣ್‌ನಿರ್ಮಾಣ್ ಯೋಜನೆ ಆಶ್ರಯದಲ್ಲಿ ವೇಮಗಲ್ ಹೋಬಳಿ ಸರ್ಕಾರಿ, ಅನುದಾನಿತ ಶಾಲಾ ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.ಅಡುಗೆಯಲ್ಲೂ ಶುಚಿತ್ವ ಕಾಪಾಡಿ
ಅಡುಗೆ ಸಿಬ್ಬಂದಿ ಮನೆಯಲ್ಲಿ ನಿಮ್ಮ ಮಕ್ಕಳನ್ನು ಕಾಣುವಷ್ಟೇ ಪ್ರೀತಿಯಿಂದ ಶಾಲಾ ವಿದ್ಯಾರ್ಥಿಗಳನ್ನೂ ಕಾಣಬೇಕು, ಅದು ನಿಮ್ಮ ಮಕ್ಕಳಿಗೂ ಶ್ರೇಯಸ್ಕರ.ಅಡುಗೆ ಕೋಣೆ ಶುಭ್ರವಾಗಿದ್ದರೆ ಮಾತ್ರ ಅಡುಗೆಯಲ್ಲೂ ಶುಚಿತ್ವ ಕಾಪಾಡಲು ಸಾಧ್ಯ. ಪಾತ್ರೆಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರು, ಗುಣಮಟ್ಟದ ತರಕಾರಿ ಬಳಕೆ ಉತ್ತಮ ಬಿಸಿಯೂಟ ತಯಾರಿಕೆಗೆ ಅತಿ ಮುಖ್ಯವಾಗಿದೆ, ಇವುಗಳು ಮಕ್ಕಳ ಆರೋಗ್ಯ ರಕ್ಷಣೆಗೂ ಸಹಕಾರಿಯಾಗಲಿದ್ದು, ಜವಾಬ್ದಾರಿಯಿಂದ ನಡೆದುಕೊಳ್ಳಿ ಎಂದರು.ಅಕ್ಷರದಾಸೋಹ ಕಾರ್ಯಕ್ರಮವನ್ನು ಕೋಲಾರ ತಾಲೂಕಿನಲ್ಲಿ ಅತ್ಯಂತ ಯಶಸ್ವಿಯಾಗಿ ಯಾವುದೇ ಸಮಸ್ಯೆಗಳಿಲ್ಲದಂತೆ ನಿರ್ವಹಿಸಿಕೊಂಡು ಬರುತ್ತಿದ್ದೇವೆ, ಅಡುಗೆ ಸಾಮಗ್ರಿಗಳ ನಿರ್ವಹಣೆ, ಲೆಕ್ಕಪತ್ರಗಳನ್ನು ಸರಿಯಾಗಿ ನಿರ್ವಹಿಸಿ, ಮಕ್ಕಳ ಹಾಜರಾತಿಗೆ ತಕ್ಕಂತೆ ಧಾನ್ಯಗಳ ಬಳಕೆ, ಸಂಗ್ರಹಣೆ ಇರಬೇಕು ಎಂದರು.ಮಕ್ಕಳ ಆರೋಗ್ಯ ಕಾಪಾಡಬೇಕು
ಅಕ್ಷರದಾಸೋಹ ಸಹಾಯಕ ನಿರ್ದೇಶಕ ಟಿ.ಎಸ್.ಸುಬ್ರಮಣಿ ಮಾತನಾಡಿ, ಒಟ್ಟಾರೆ ಮಕ್ಕಳ ಆರೋಗ್ಯ ಕಾಪಾಡುವುದು ಶಿಕ್ಷಕರ ಜತೆಗೆ ಅಡುಗೆ ಸಿಬ್ಬಂದಿಯದ್ದು ಜವಾಬ್ದಾರಿಯಾಗಿದೆ, ಶಾಲೆಯ ಅಡುಗೆ ಮನೆ ನಿಮ್ಮ ಮನೆಯ ಅಡುಗೆ ಮನೆ ಎಂದೇ ಭಾವಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ, ಅಡುಗೆ ಮನೆಯಲ್ಲಿ ಜೇಡರ ಬಲೆ, ಹಲ್ಲಿ, ಇಲಿ, ಹೆಗ್ಗಣಗಳು ಇರದಂತೆ ಎಚ್ಚರವಹಿಸಿ ಎಂದು ಕಿವಿಮಾತು ಹೇಳಿದರು.ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಮಾತನಾಡಿ, ಸಾಂಕ್ರಾಮಿಕ ರೋಗಗಳ ತಡೆ, ಸೊಳ್ಳೆಗಳ ನಾಶ ಮತ್ತಿತರ ಆರೋಗ್ಯ ರಕ್ಷಣಾ ಕಾರ್ಯಕ್ರಮಗಳ ಕುರಿತು ಮಕ್ಕಳಿಗೆ ಅರಿವು ಮೂಡಿಸಿದರು. ಶೌಚಕ್ಕೆ ಹೋದ ನಂತರ, ಊಟಕ್ಕೆ ಮುನ್ನ ತಪ್ಪದೇ ಕೈತೊಳೆಯುವ ಅಭ್ಯಾಸ ಮಾಡಿ ಎಂದು ಸಲಹೆ ನೀಡಿದರು.ಶ್ರೀ ಗುರು ಚೈತನ್ಯ ಗ್ಯಾಸ್ ಏಜೆನ್ಸಿಯ ಗುರುರಾಜ್, ಅಡುಗೆ ಅನಿಲ ಬಳಕೆ, ಅವಘಡ ತಪ್ಪಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿ, ತಿಂಗಳಿಗೆ ಅಗತ್ಯವಾದ ಅಡುಗೆ ಅನಿಲ ಸಿಲೆಂಡರ್‌ಗಳ ಕುರಿತು ಮಾಹಿತಿ ಇಂಡೆಂಟ್ ನೀಡಿ ಎಂದರು.ಸಿಲಿಂಡರ್ ಬಗ್ಗೆ ಮುನ್ನೆಚ್ಚರಿಕೆ
ಅಗ್ನಿಶಾಮಕ ಠಾಣಾಧಿಕಾರಿಗಳಾದ ಶ್ರೀನಾಥ್, ಅಗ್ನಿ ಅವಘಡ ಎದುರಾದಾಗ ವಹಿಸಬೇಕಾದ ಮುಂಜಾಗ್ರತೆಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಟ್ಟು, ಸಿಲೆಂಡರ್ ಬಳಕೆ ಮಾಡುವಾಗ ಎಚ್ಚರವಹಿಸಿ, ನಿಗದಿತ ಕಾಲಕ್ಕೆ ಗ್ಯಾಸ್ ಪೈಪ್ ಬದಲಿಸಿ, ಸ್ಟೌವ್ ಸ್ವಚ್ಛತೆ ಕಾಪಾಡಿಕೊಳ್ಳಿ, ಅಡುಗೆ ಮುಗಿದ ನಂತರ ರೆಗ್ಯುಲೇಟರ್ ಆಫ್ ಮಾಡಿ ಎಂದು ಸಲಹೆ ನೀಡಿದರು.ಕ್ಯಾಲನೂರು ಸಿಆರ್‌ಪಿ ದಿವ್ಯ. ವೇಮಗಲ್ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ, ದೈಹಿಕ ಶಿಕ್ಷಕ ವೆಂಕಟೇಶ್ ಸೇರಿದಂತೆ ವೇಮಗಲ್ ಹೋಬಳಿಯ ಅಡುಗೆ ಸಿಬ್ಬಂದಿ ಹಾಜರಿದ್ದರು.