ಸ್ವಚ್ಛತೆ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ

| Published : Oct 01 2024, 01:23 AM IST

ಸ್ವಚ್ಛತೆ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ
Share this Article
  • FB
  • TW
  • Linkdin
  • Email

ಸಾರಾಂಶ

ದಾಬಸ್‌ಪೇಟೆ: ಸಮುದಾಯಕ್ಕೆ ಆರೋಗ್ಯ ಮತ್ತು ನೈರ್ಮಲ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತದ ಜೊತೆಗೆ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಯೋಗೀಶ್ ತಿಳಿಸಿದರು.

ದಾಬಸ್‌ಪೇಟೆ: ಸಮುದಾಯಕ್ಕೆ ಆರೋಗ್ಯ ಮತ್ತು ನೈರ್ಮಲ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತದ ಜೊತೆಗೆ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಯೋಗೀಶ್ ತಿಳಿಸಿದರು.

ಅಗಳಕುಪ್ಪೆ ಗ್ರಾಪಂ ಆವರಣದಲ್ಲಿ ಅಬ್ದುಲ್‌ನಜೀರ್ ಸಾಬ್ ರಾಜ್ಯ ಗ್ರಾಮೀಣಭಿವೃದ್ಧಿ ಸಂಸ್ಥೆ ಮೈಸೂರು ವತಿಯಿಂದ ಹಮ್ಮಿಕೊಂಡಿದ್ದ ಸಮುದಾಯ ಜನರಿಗೆ ಆರೋಗ್ಯ ಕುರಿತು ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಆರೋಗ್ಯ ಶಿಬಿರದಲ್ಲಿ ಪ್ರಾಥಮಿಕ ಹಂತದಲ್ಲೇ ರೋಗ ಪತ್ತೆ ಹಚ್ಚುವ ಮೂಲಕ ಗ್ರಾಮೀಣ ಜನತೆಯನ್ನು ರೋಗ ಬರದಂತೆ ಎಚ್ಚರ ವಹಿಸುವುದು, ಲಸಿಕೆ ಪಡೆದುಕೊಳ್ಳಲು ಪ್ರೇರಣೆ, ಕ್ಷಯ ರೋಗ ಹಾಗೂ ಮಾನಸಿಕ ಆರೋಗ್ಯದ ಜಾಗೃತಿ, ಬಾಲ್ಯ ವಿವಾಹ ತಡೆ, ಅಪೌಷ್ಟಿಕತೆ ತಡೆಯ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷೆ ಶೋಭಾ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಯ ಕೊರತೆಯಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಹರಡುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಪ್ರತಿಯೊಬ್ಬರು ನಮ್ಮ ಪರಿಸರ, ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.

ನೆಲಮಂಗಲ ತಾಲೂಕಿನ ವಿಕೇಂದ್ರಿಕೃತ ತರಬೇತಿ ಸಂಯೋಜಕ ರುದ್ರೇಶ್ ಮಾತನಾಡಿ, ಗ್ರಾಮೀಣ ಜನರ ಅನುಕೂಲಕ್ಕಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಗ್ರಾಮ ಆರೋಗ್ಯ ಯೋಜನೆ ಜಾರಿಗೊಳಿಸಿದೆ ಎಂದರು.

ಗ್ರಾಮ ಆರೋಗ್ಯ ಕುರಿತು ಮಧುಮೇಹ, ಅಧಿಕ ರಕ್ತದೊತ್ತಡ, ಕ್ಷಯ, ಅಪೌಷ್ಟಿಕತೆ, ರಕ್ತಹೀನತೆ, ಬಾಲ್ಯವಿವಾಹ ಹಾಗೂ ಗ್ರಾಮ ಆರೋಗ್ಯದ ಮಾರ್ಗಸೂಚಿ, ಕಾರ್ಯತಂತ್ರ, ದತ್ತಾಂಶ ಸಂಗ್ರಹಣೆ ಮತ್ತು ಮೇಲ್ಪಿಚಾರಣೆ ಬಗ್ಗೆ ಹಾಗೂ ಸಮುದಾಯದ ಆರೋಗ್ಯ ನಿರ್ವಹಣೆಯ ಬಗ್ಗೆ ತರಬೇತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಲಕ್ಷ್ಮೀದೇವಿ, ಪಿಡಿಒ ಗಂಗಾಧರಯ್ಯ ಸದಸ್ಯರುಗಳಾದ ಪುಷ್ಪಕಲಾ, ವನಿತಾ, ಬಸವರಾಜಯ್ಯ ಪ್ರಭಾವತಿ, ವೆಂಕಟಚಾಲಯ್ಯ ಆರೋಗ್ಯ ಇಲಾಖೆಯ ವಿಶಾಲಮ್ಮ, ಸಾನಂದ್ ಕುಮಾರ್, ವಿಜಯಲಕ್ಷ್ಮಿ, ಆಶಾ ಕಾರ್ಯಕರ್ತೆ ಪುಷ್ಪ, ಎಂಬಿಕೆ ಅನುಸೂಯ, ಬಿಲ್ ಕಲೆಕ್ಟರ್ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಇದ್ದರು.