ಮುಂದಿನ ಪೀಳಿಗೆಗೆ ಮೈತೇಯಿ ಸಂಸ್ಕೃತಿ ಉಳಿವು ಅವಶ್ಯ: ವಿವೇಕ್ ಆಳ್ವ

| Published : Dec 02 2024, 01:18 AM IST

ಸಾರಾಂಶ

ನೀಲಾಧರ್‌ ಕರ್ಕೇರ ಮತ್ತು ಸುಶ್ಮಿತಾ ಅವರ ಮಾರ್ಗದರ್ಶನದಲ್ಲಿ ಮಣಿಪುರಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಹೆಮ್ಮೆಯ ಜಾನಪದ ಕಲೆ ವೀರಗಾಸೆ ಕುಣಿತ ತರಬೇತಿ ನೀಡಿ ವಿಶೇಷವಾಗಿ ಪ್ರದರ್ಶಿಶನ ನೀಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಎರಡು ಸಾವಿರ ವರ್ಷಗಳ ಇತಿಹಾಸವಿರುವ ಮೈತೇಯಿ ಸಂಸ್ಕೃತಿ ಇಂದಿಗೂ ಶ್ರೀಮಂತವಾಗಿ ಉಳಿದಿರುವುದಕ್ಕಾಗಿ ನಾವೆಲ್ಲರೂ ಹೆಮ್ಮೆ ಪಡಬೇಕು. ಮೈತೇಯಿ ಸಂಸ್ಕೃತಿಯನ್ನು ಉಳಿಸಬೇಕಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸಂಸ್ಥೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ ‘ನಿಂಗೋಲ್ ಚಕೊಬಾ'''''''' ಆಚರಣೆಯಲ್ಲಿ ಅವರು ಮಾತನಾಡಿದರು.

ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಸ್ಥೆಯ ಹೆಮ್ಮೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಬಳಿಕ ಮಣಿಪುರಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ನೀಲಾಧರ್‌ ಕರ್ಕೇರ ಮತ್ತು ಸುಶ್ಮಿತಾ ಅವರ ಮಾರ್ಗದರ್ಶನದಲ್ಲಿ ಮಣಿಪುರಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಹೆಮ್ಮೆಯ ಜಾನಪದ ಕಲೆ ವೀರಗಾಸೆ ಕುಣಿತ ತರಬೇತಿ ನೀಡಿ ವಿಶೇಷವಾಗಿ ಪ್ರದರ್ಶಿಶನ ನೀಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.10 ಮೈತೈಯಿ ಕುಟುಂಬಗಳಿಗೆ ತಲಾ 10 ಸಾವಿರ ರು. ನೆರವು: ಮೈತೇಯಿ ಸಂಸ್ಕೃತಿ ಆಚರಣೆ ಮಾಡುವುದರೊಂದಿಗೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮಣಿಪುರದಲ್ಲಿ ಕಷ್ಟದ ಪರಿಸ್ಥಿತಿಯಲ್ಲಿ ಇರುವ ಆಯ್ದ ೧೦ ಕುಟುಂಬಗಳಿಗೆ ಅದರಲ್ಲೂ ವಿಶೇಷವಾಗಿ ಅನಾಥ ನಿರಾಶ್ರಿತ ಕುಟುಂಬಗಳಿಗೆ ತಲಾ ೧೦ ಸಾವಿರ ಸಹಾಯಧನದಂತೆ ಒಂದು ಲಕ್ಷ ರುಪಾಯಿ ನೀಡಲಾಗುವುದು ಎಂದು ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದರು.

ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ, ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿಕುಮಾರ್, ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ರೋಶನ್ ಪಿಂಟೋ ಇದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಎಲ್. ಶ್ರೀನಿವಾಸ್ ನಿರೂಪಿಸಿದರು. ನರೇಶ್ ಮೈಬಮ್ ಸ್ವಾಗತಿಸಿ, ವಂದಿಸಿದರು.

ಮಣಿಪುರಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ವಿದ್ಯಾರ್ಥಿಗಳು ತಯಾರಿಸಿದ ಮಣಿಪುರಿಯ ರುಚಿಕರವಾದ ಸಾಂಪ್ರದಾಯಿಕ ಖಾದ್ಯಗಳಾದ ಇರೊಂಬಾ, ಓಟಿ, ಎಂಗ್ ತೊಂಬಾ, ಮಣಿಪುರಿ ಖೀರ್ , ಚಂಪೂಟ್ ಮತ್ತು ಕಾಂಘೌವನ್ನು ಹಬ್ಬದಲ್ಲಿ ಉಣ ಬಡಿಸಲಾಯಿತು.