ಒಂದೂವರೆ ತಿಂಗಳಲ್ಲಿ ಕಾಂಗ್ರೆಸ್‌ಗೆ ‘ಮೇಜರ್‌ ಸರ್ಜರಿ’

| Published : Sep 15 2024, 01:52 AM IST

ಒಂದೂವರೆ ತಿಂಗಳಲ್ಲಿ ಕಾಂಗ್ರೆಸ್‌ಗೆ ‘ಮೇಜರ್‌ ಸರ್ಜರಿ’
Share this Article
  • FB
  • TW
  • Linkdin
  • Email

ಸಾರಾಂಶ

ಮೂಡ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಒಂದೇ ಒಂದು ಸಹಿ ಕೂಡ ಇಲ್ಲ. ಹೀಗಿರುವಾಗ ನ್ಯಾಯಾಲಯದಿಂದ ಧನಾತ್ಮಕ ತೀರ್ಪನ್ನೇ ನಿರೀಕ್ಷೆ ಮಾಡುತ್ತಿದ್ದೇವೆ. ಆರ್‌.ವಿ. ದೇಶಪಾಂಡೆ ಸೇರಿದಂತೆ ಕೆಲವು ನಾಯಕರು ತಾವು ಸಿಎಂ ಆಕಾಂಕ್ಷಿ ಎಂದಿದ್ದಾರೆಯೇ ವಿನಾ ತಾವೇ ಸಿಎಂ ಆಗೋದಾಗಿ ಎಲ್ಲೂ ಹೇಳಿಲ್ಲ. ಆದರೆ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಚಂದ್ರಶೇಖರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಕಾಂಗ್ರೆಸ್‌ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಗೊಳಿಸಲು ರಾಜ್ಯಾದ್ಯಂತ ಅಗತ್ಯ ಇರುವ ಎಲ್ಲ ಕಡೆಗಳಲ್ಲಿ ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಬ್ಲಾಕ್‌ ಅಧ್ಯಕ್ಷರ ಬದಲಾವಣೆಯನ್ನು ಒಂದೂವರೆ ತಿಂಗಳೊಳಗೆ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌ ಹೇಳಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ವಸಂತ ಕುಮಾರ್‌, ಮಂಜುನಾಥ ಭಂಡಾರಿ ಹಾಗೂ ಕೆಪಿಸಿಸಿ ಹಿರಿಯ ನಾಯಕರ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪಕ್ಷ ಸಂಘಟನೆಗಾಗಿ ಕೆಪಿಸಿಸಿಯ ಎಲ್ಲ ಐವರು ಕಾರ್ಯಾಧ್ಯಕ್ಷರ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸಲು ಅಗತ್ಯ ಕಾರ್ಯತಂತ್ರ ರೂಪಿಸಲಿದೆ. ಇದರೊಂದಿಗೆ ಅಗತ್ಯ ಇರುವೆಡೆ ಬ್ಲಾಕ್‌ ಮತ್ತು ಜಿಲ್ಲಾಧ್ಯಕ್ಷರ ಬದಲಾವಣೆ ಪ್ರಕ್ರಿಯೆ ಕೂಡ ನಡೆಯಲಿದೆ. ದೀರ್ಘಾವಧಿಯಿಂದ ಇಂತಹ ಹುದ್ದೆಗಳಲ್ಲಿ ಮುಂದುವರಿಯುತ್ತಿರುವವರು ಮತ್ತು ಇತರ ಅಂಶಗಳನ್ನು ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.ಕರಾವಳಿಗೆ ಹೊಸ ಕಾರ್ಯತಂತ್ರ: ಕರಾವಳಿಯ ಜಿಲ್ಲೆಗಳಲ್ಲಿ ಕಾಂಗ್ರೆಸ್‌ನ ಗತ ವೈಭವವನ್ನು ಮರಳಿ ಪಡೆಯಲು ಹೊಸ ಕಾರ್ಯತಂತ್ರ ಸಿದ್ಧಪಡಿಸುತ್ತಿದ್ದೇವೆ. ಪಕ್ಷ ಸಂಘಟನೆ ನಿಟ್ಟಿನಲ್ಲಿ ಈ ಪ್ರದೇಶವನ್ನು ಗಂಭೀರವಾಗಿ ಪರಿಗಣಿಸಲಿದ್ದೇವೆ ಎಂದ ಚಂದ್ರಶೇಖರ್‌, ಕಳೆದ ಹಲವು ವರ್ಷಗಳಿಂದ ಕರಾವಳಿಯಲ್ಲಿ ಬಿಜೆಪಿ ಸಂಸದರು, ಶಾಸಕರೇ ಅಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ ಈ ಅವಧಿಯಲ್ಲಿ ಜನರಿಗಾಗಿ ಯಾವುದೇ ಹೊಸ ಯೋಜನೆ ತಂದಿಲ್ಲ. ಹಾಗಾಗಿ ಇಲ್ಲಿ ಕಾಂಗ್ರೆಸ್‌ನ್ನು ಮರಳಿ ಅಧಿಕಾರಕ್ಕೆ ತರಲು ವಿಭಿನ್ನ ಶೈಲಿಯ ಕಾರ್ಯಯೋಜನೆ ರೂಪಿಸಲು ಆಗಮಿಸಿದ್ದೇವೆ ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ವಸಂತ ಕುಮಾರ್‌, ಮಂಜುನಾಥ ಭಂಡಾರಿ, ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಬಾಬುರಾವ್‌, ಸತ್ಯನಾರಾಯಣ, ಇನಾಯತ್‌ ಅಲಿ, ಮುಖಂಡರಾದ ಎಂಎಸ್‌ ಮೊಹಮ್ಮದ್‌ ಇದ್ದರು.ಸಿಎಂ ಬದಲಾವಣೆ ಪ್ರಶ್ನೆ ಇಲ್ಲ: ಚಂದ್ರಶೇಖರ್‌